ಮೂಲ್ಕಿ : ಹಾಡುಹಗಲಲ್ಲಿ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ. ಮೂಡಬಿದ್ರೆಯ ಉದ್ಯಮಿಯಾಗಿರುವ ಅಬ್ದುಲ್ ಲತೀಫ್ (38 ವರ್ಷ) ಎಂಬವರೇ ಹತ್ಯೆಗೀಡಾದವರು. ಕಾರು ಹಾಗೂ ಬೈಕಿನಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳ ತಂಡ ಮೂಲ್ಕಿಯಲ್ಲಿ ಸಾರ್ವಜನಿಕರ ಎದುರಲ್ಲೇ ತಲ್ವಾರ್ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ವೈಯಕ್ತಿತ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗುತ್ತಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.