Mumbai accident : ಭೀಕರ ಬಸ್‌ ಅಪಘಾತ : 12 ಮಂದಿ ಸಾವು, 27 ಮಂದಿಗೆ ಗಾಯ

ಮುಂಬೈ : (Mumbai accident ) ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಪುಣೆ-ಮುಂಬೈ ಹೆದ್ದಾರಿಯಲ್ಲಿ ಭೀಕರ ಬಸ್‌ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 27 ಮಂದಿ ಪ್ರಯಾಣಿಕರು ಗಾಯಗೊಂಡು 12 ಮಂದಿ ಪ್ರಯಾಣಿಕರು ಸಾವಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡದಿದೆ. ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ಸು ಕಮರಿಗೆ ಉರುಳಿ ಈ ಘಟನೆ ನಡೆದಿದೆ.

ಖಾಸಗಿ ಬಸ್ ಪುಣೆಯಿಂದ ಮುಂಬೈಗೆ ಸಾಂಪ್ರದಾಯಿಕ ಸಂಗೀತ ತಂಡದ ಸದಸ್ಯರನ್ನು ಹೊತ್ತೊಯ್ಯುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಬೆಳಿಗ್ಗೆ 4.50 ರ ಸುಮಾರಿಗೆ ಕಮರಿಗೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ಸಾವಪ್ಪಿದ್ದಾರೆ. ಇನ್ನೂ 27 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖೋಪೋಲಿ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಕಾಣೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ಕೂಡ ನಡೆಯುತ್ತಿದೆ.

ಇನ್ನೂ ಅಪಘಾತಕ್ಕೀಡಾದವರು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್ ಮತ್ತು ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ಗೆ ಸೇರಿದವರು ಎಂದು ತಿಳಿದುಬಂದಿದೆ. ಗಾಯಗೊಂಡ ಪ್ರಯಾಣಿಕರು 18-25 ವರ್ಷ ವಯಸ್ಸಿನವರು ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕಾಣೆಯಾದ ಪ್ರಯಾಣಿಕರನ್ನು ಹುಡುಕಲು ಸ್ಥಳೀಯ ಪೊಲೀಸರು ಮತ್ತು ಚಾರಣಿಗರ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನೆಯ ಬಗ್ಗೆ ರಾಯಘಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದೇವನಹಳ್ಳಿ : ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ಸಾವು

ಇದನ್ನೂ ಓದಿ : Mangaluru accident : ಮಂಗಳೂರು : ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಇದನ್ನೂ ಓದಿ : Land scam case : ಐಎಎಸ್ ಅಧಿಕಾರಿ ಛಾವಿ ರಂಜನ್ ವಿರುದ್ಧ ಇಡಿ ದಾಳಿ

Mumbai accident: Terrible bus accident: 12 dead, 27 injured

Comments are closed.