Mumbai bus accident: ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಬಸ್‌ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಸಾವು

ಮುಂಬೈ: (Mumbai bus accident) ಪ್ರವಾಸ ಮುಗಿಸಿ ವಾಪಾಸ್‌ ಆಗುತ್ತಿದ್ದ ಶಾಲಾ ಬಸ್‌ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈನ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ನಡೆದಿದೆ.

ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಕೇಂದ್ರದ 10ನೇ ತರಗತಿಯ 48 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ (Mumbai bus accident) ಲೋನಾವಾಲಾದಿಂದ ಪ್ರವಾಸ ಮುಗಿಸಿ ಹಿಂತಿರುಗುತ್ತಿತ್ತು. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ.

ಬಸ್‌ ಪಲ್ಟಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸಲಾಗಿದೆ. ಕೋಚಿಂಗ್‌ ತರಗತಿ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ನಾಗಮಂಗಲ ತಾಲೂಕಿನ ನಾಗತೀಹಳ್ಳಿಯಲ್ಲಿ ನಡೆದಿದೆ.

ಸ್ವಿಫ್ಟ್ ಹಾಗೂ ಇನ್ನೋವಾ ಕಾರುಗಳ ನಡುವೆ ಇಂದು ರಾತ್ರಿ ವೇಳೆ ಭೀಕರವಾದ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : Harassment: ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ ಸೈಕೋ ಪತಿ; ಅತ್ತೆ-ಮಾವ ಕೂಡಾ ಸಾಥ್..!

ಇದನ್ನೂ ಓದಿ : Student rape: ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಂದ ಹೀನಾಯ ಕೃತ್ಯ; ಅಮಲು ಪದಾರ್ಥ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

ಇದನ್ನೂ ಓದಿ : Mangaluru car accident: ಆಟವಾಡುತ್ತಿದ್ದ ಮಕ್ಕಳಿಗೆ ಕಾರು ಡಿಕ್ಕಿ: 7 ಮಕ್ಕಳಿಗೆ ಗಾಯ

ಬಿಂಡಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವವರ ವಿವರ ಇನ್ನೂ ತಿಳಿದುಬಂದಿಲ್ಲ.

(Mumbai bus accident) Two students died and many others were injured when the school bus they were returning from a trip overturned at Khopoli in Raigarh district of Mumbai.

Comments are closed.