ಆನೇಕಲ್ : ಒಂಟಿ ಮಹಿಳೆಯನ್ನು ಹತ್ಯೆಗೈದು ನಂತರ ಮನೆ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಿಬ್ಬರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿಗಳಿಬ್ಬರ ಕಾಲಿಗೆ ಗಂಭೀರ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದ ವಾರವಷ್ಟೇ ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಬಳಿ ಮನೆಯಲ್ಲಿದ್ದ ಮಹಿಳೆಯನ್ನ ಕೊಲೆ ಮಾಡಿದ್ದರು. ನಂತರ ಮಹಿಳೆ ಯ ಮನೆಯಲ್ಲಿ ದರೋಡೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

ಆದರೆ ಮುತ್ಯಾಲಮಡುವಿನಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿ ವೇಲು, ಬಾಲಕೃಷ್ಣ ಬಂಧಿಸಲು ಹೆಬ್ಬಗೋಡಿ ಇನ್ಸ್‌ಪೆಕ್ಟರ್ ಗೌತಮ್ ಹಾಗು ಬನ್ನೇರುಘಟ್ಟ ಪೊಲೀಸ್ ಎಸ್.ಐ ಗೋವಿಂದರಾಜು ತೆರಳಿದ್ದರು.

ಈ ವೇಳೆ ಏಕಾಏಕಿ ಹೆಬ್ಬಗೋಡಿ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿದ್ದಾರೆ.