ಚಾಮುಂಡೇಶ್ವರಿಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ : ಗ್ರಹ ಸಚಿವ ಆರಗ ಜ್ಞಾನೇಂದ್ರ

ಮೈಸೂರು : ಗ್ಯಾಂಗ್ ರೇಪ್ ಪ್ರಕರಣದ ತನಿಖೆ ವೇಗವಾಗಿ ಸಾಗುತ್ತಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಭೇದಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ. ವಿಚಾರಣೆಗೆ ತೊಂದರೆಯಾಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ ಎಂದರು.

ಇದನ್ನೂ ಓದಿ: MYSORE : ಮೈಸೂರು ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ಸುನಂದಾ ಪಾಲನೇತ್ರ ಹೊಸ ಮೇಯರ್‌

ನಂತರ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಮಾಡಿದ್ದೇನೆ. ದರ್ಶನ ಮಾಡಿ ನನಗೆ ತುಂಬಾ ಸಂತೋಷವಾಗಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ, ನಮ್ಮ ಪೊಲೀಸ್ ಇಲಾಖೆಗೆ ಶಕ್ತಿಕೊಡುವಂತೆ ಕೇಳಿಕೊಂಡಿದ್ದೇನೆ. ರಾಜ್ಯದ ಜನತೆಗೆ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಇದನ್ನೂ ಓದಿ: MYSORE : ವೀಕೆಂಡ್‌ ಲಾಕ್‌ಡೌನ್‌ಗೆ ವಿರೋಧ : ವರ್ತಕರಿಗೆ ಬೆಂಬಲ ಸೂಚಿಸಿದ ಸಚಿವ ಸೋಮಶೇಖರ್‌

Comments are closed.