ಮಂಗಳವಾರ, ಏಪ್ರಿಲ್ 29, 2025
HomeCrimeಮೈಸೂರು ದಸರಾದಲ್ಲಿ 14‌ ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಮೈಸೂರು ದಸರಾದಲ್ಲಿ 14‌ ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

- Advertisement -

ಮೈಸೂರು : ವಿಶ್ವವಿಖ್ಯಾತಿ ಪಡೆದ ಮೈಸೂರು ದಸರಾ ಎಂದರೆ ಹೆಚ್ಚಾಗಿ ಎಲ್ಲರಿಗೂ ನೆನಪಾಗುವುದೇ ಅಂಬಾರಿ ಹೊತ್ತು ನಡೆಯುವ ಆನೆ. ದಸರಾದಲ್ಲಿ ಭಾಗವಹಿಸುವ ಆನೆಗಳಿಗೆ ಒಂದೊಂದು ಹೆಸರನ್ನು ಸೂಚಿಸಿದ್ದು, ಅದರಲ್ಲೂ ವಿಶೇಷವಾಗಿ ಮೈಸೂರು ದಸರಾದಲ್ಲಿ 14‌ ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ (Mysore Dasara Ambari Elephant Balarama) ಅನಾರೋಗ್ಯದಿಂದ ಮೃತ ಪಟ್ಟಿದೆ.

ಮೃತ ಬಲರಾಮ ಆನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ 14‌ ಬಾರಿ ಚಿನ್ನದ ಅಂಬಾರಿ ಹೊತ್ತು ಹೋಗುವ ಮೂಲಕ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಮೃದು ಸ್ವಭಾವದ ಬಲರಾಮ ಆನೆ ಇತ್ತೀಚೆಗೆಷ್ಟೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿತ್ತು. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದರು. ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ಅಸ್ವಸ್ಥಗೊಂಡಿತ್ತು. ವೈದ್ಯರು ನೀಡುತ್ತಿದ್ಧ ಚಿಕಿತ್ಸೆಗೆ ಸ್ಪಂದಿಸದೇ ಬಲರಾಮ ಭಾನುವಾರ ಇಹಲೋಕ ತ್ಯಜಿಸಿದ್ದಾನೆ.

ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿತ್ತು. ಹುಣ್ಣು ಉಲ್ಬಣಿಸಿ ಅಸ್ವಸ್ಥಗೊಂಡಿದ್ದ ಅದಕ್ಕೆ ಶಿಬಿರದಲ್ಲಿಯೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಇದನ್ನೂ ಓದಿ : ವಿಷಕಂಠನ ಸನ್ನಿಧಿಯಲ್ಲಿ ನಮೋ : ಪ್ರಧಾನಿ ಪ್ರದೋಷ ಪೂಜೆಯ ವಿಶೇಷತೇ ಏನು ಗೊತ್ತಾ ?

ಇದನ್ನೂ ಓದಿ : SSLC Result 2023 : ಇಂದು ಬೆಳಿಗ್ಗೆ 10ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಆನೆಗೆ ಆಹಾರ ತಿನ್ನಲು, ನೀರು ಕುಡಿಯಲು ಆಗದಂತಹ ಪರಿಸ್ಥಿತಿ ಉಂಟಾಗಿತ್ತು. ನಾಗರಹೊಳೆ ಪಶುವೈದ್ಯ ಡಾ.ರಮೇಶ್‌ ಸ್ಥಳದಲ್ಲೇ ಠಿಕಾಣಿ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ಜೊತೆಗೆ ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್‌ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಒ ರತ್ನಾಕರ್‌, ಡಿಆರ್‌ಎಫ್‌ಒ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ ಹಾಗೂ ಸಿಬ್ಬಂದಿ ಬಲರಾಮನ ಆರೈಕೆಯಲ್ಲಿತೊಡಗಿಸಿಕೊಂಡಿದ್ದರು.

ಇದನ್ನೂ ಓದಿ : IT Raid Bangalore : ಫೈನಾನ್ಶಿಯರ್‌ಗಳ ಮನೆ ಮೇಲೆ ಐಟಿ ದಾಳಿ : 20 ಕೋಟಿ ರೂಪಾಯಿ ಜಪ್ತಿ

Mysore Dasara Ambari Elephant Balarama : Balarama, the elephant who carried golden ambari 14 times in Mysore Dasara, is no more

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular