New Delhi Railway Station : ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶ : ಮಹಿಳೆ ಸಾವು

ದೆಹಲಿ : (New Delhi Railway Station) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ರಾತ್ರಿ ಲಘುವಾಗಿ ಸಾಧಾರಣ ಮಳೆಯ ನಂತರ ನವದೆಹಲಿ ರೈಲು ನಿಲ್ದಾಣದ ಹೊರಗಿನ ನೀರಿನಿಂದ ತುಂಬಿರುವ ಪ್ರದೇಶದಲ್ಲಿ ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಮಹಿಳೆಯನ್ನು ನವದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿ ಭೋಪಾಲ್‌ಗೆ ಹೋಗುವ ಶತಾಬ್ದಿ ರೈಲನ್ನು ಹತ್ತುವ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ನಿಲ್ದಾಣದ ಆವರಣದಲ್ಲಿ ನೀರಿಗೆ ಕಾಲಿಡುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಅಹುಜಾ ವಿದ್ಯುತ್ ಕಂಬವನ್ನು ಹಿಡಿದಿದ್ದರಿಂದ ವಿದ್ಯುತ್ ಸ್ಪರ್ಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಮಹಿಳೆ ನೀರಿನಲ್ಲಿ ಕಾಲಿಡುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಚಂಡೀಗಢಕ್ಕೆ ಹೋಗುತ್ತಿದ್ದೆವು. ನನ್ನ ಮಗಳು ಸಾಕ್ಷಿ ಅಹುಜಾ ವಿದ್ಯುದಾಘಾತದಿಂದ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿ ಬಂದಾಗ ನಾನು ಪಾರ್ಕಿಂಗ್ ಪ್ರದೇಶದಲ್ಲಿದ್ದೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇದು ಸಂಭವಿಸಿದೆ,” ಎಂದು ಅಹುಜಾ ತಂದೆ ಲೋಕೇಶ್ ಕುಮಾರ್ ಚೋಪ್ರಾ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ಪ್ರದೇಶವು ಇಂದು (ಜೂನ್ 25) ಬೆಳಿಗ್ಗೆ ಬಿಸಿಲಿನಿಂದ ವಾತಾವರಣದಿಂದ ಕೂಡಿದ್ದು, ತಂದ ನಂತರ ಲಘುವಾದ ಮಳೆಯಾಗಿದೆ.

ಇದನ್ನೂ ಓದಿ : Shivamogga Students Arrest : ಶಿವಮೊಗ್ಗದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಇದನ್ನೂ ಓದಿ : Illegally Installed Ambedkar statue : ಅಕ್ರಮವಾಗಿ ಸ್ಥಾಪಿಸಿದ್ದ ಅಂಬೇಡ್ಕರ್ ಪ್ರತಿಮೆ ತೆಗೆಯಲು ಯತ್ನ : ಇಬ್ಬರು ಪೊಲೀಸರಿಗೆ ಗಾಯ, ಬುಗಿಲೆದ್ದ ಹಿಂಸಾಚಾರ

ಜೂನ್ 24 ರಿಂದ 26 ರ ಅವಧಿಯಲ್ಲಿ ಪಶ್ಚಿಮ ಉತ್ತರ ಪ್ರದೇಶದ ಮೇಲೆ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ. ಇನ್ನು ಜೂನ್ 25 ರಿಂದ 26 ರಂದು ಪೂರ್ವ ಉತ್ತರ ಪ್ರದೇಶದದಲ್ಲಿ ಮಳೆಯಾಗಲಿದೆ. ಜೂನ್ 25 ಮತ್ತು 26 ರಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ ಮೇಲೆ ಮತ್ತು ಜೂನ್ 25 ರಿಂದ28 ರವರೆಗೂ ಪೂರ್ವ ರಾಜಸ್ಥಾನದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

New Delhi Railway Station: Electrocution in railway station: Woman dies

Comments are closed.