Newborns death: ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡು 4 ನವಜಾತ ಶಿಶುಗಳ ಸಾವು: ತನಿಖೆಗೆ ಆದೇಶಿಸಿದ ಸರ್ಕಾರ

ಛತ್ತೀಸಗಢ: Newborns death: ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಕ್ಕೆ 4 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಛತ್ತೀಸಗಢದ ಅಂಬಿಕಾಪುರ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ವಿದ್ಯುತ್ ಕಡಿತವೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದ, ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ.

ಛತ್ತೀಸಗಢದ ಅಂಬಿಕಾಪುರ ವೈದ್ಯಕೀಯ ಕಾಲೇಜಿನಲ್ಲಿ ಎಸ್ ಎನ್ ಸಿಯು ವಾರ್ಡ್ ನಲ್ಲಿ ಸುಮಾರು 4 ಗಂಟೆಗಳ ಕಾಲ ವಿದ್ಯುತ್ ಕಡಿತ ಉಂಟಾಗಿದೆ. ಇದರಿಂದ ವಾರ್ಡ್‍ನ ವೆಂಟಿಲೇಟರ್ ಗಳನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ವಾರ್ಡ್ ನಲ್ಲಿದ್ದ 4 ಶಿಶುಗಳು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಇಂದು ಮುಂಜಾನೆ 5.30ರಿಂದ 8.30ರ ನಡುವೆ ವಿದ್ಯುತ್ ಕಡಿತಗೊಂಡಿದ್ದು, ಇದೇ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆಯ ನಿರ್ಲಕ್ಷಕ್ಕೆ ಶಿಶುಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಮಾತ್ರ ವಿದ್ಯುತ್ ಕಡಿತಕ್ಕೂ ಶಿಶುಗಳ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದಿದೆ.

ಇದನ್ನೂ ಓದಿ: Wife murder: ಪತ್ನಿಯನ್ನು ಕೊಂದು ಡ್ರಮ್ ನಲ್ಲಿ 1 ವರ್ಷ ಶವ ಬಚ್ಚಿಟ್ಟ ಪತಿ: ಮನೆ ಮಾಲೀಕನಿಂದ ಬಯಲಾಯ್ತು ಕೃತ್ಯ

ಪ್ರಾಥಮಿಕ ಮಾಹಿತಿಯ ಪ್ರಕಾರ 4 ಶಿಶುಗಳು ಮೊದಲೇ ಗಂಭೀರ ಸ್ಥಿತಿಯಲ್ಲಿದ್ದು, ಅದನ್ನು ಎಸ್ ಎನ್ ಸಿಯುಗೆ ದಾಖಲಿಸಲಾಗಿತ್ತು. ನಾಲ್ವರು ಶಿಶುಗಳ ಪೈಕಿ 2 ಶಿಶುಗಳು ವೆಂಟಿಲೇಟರ್ ಬೆಂಬಲದಲ್ಲಿದ್ದವು. ಮಧ್ಯರಾತ್ರಿ 1 ಗಂಟೆಯಿಂದ 1.30ರವರೆಗೆ ಆಸ್ಪತ್ರೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ, ಆದರೆ ಕೂಡಲೇ ಅದನ್ನು ಸರಿಪಡಿಸಲಾಗಿತ್ತು. ಆಸ್ಪತ್ರೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೂ ಎಸ್ ಎನ್ ಸಿಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ಅಲ್ಲಿಗೆ ಪರ್ಯಾಯ ವಿದ್ಯುತ್ ಸರಬರಾಜಿನ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ಆದರೆ ಇದನ್ನೊಪ್ಪದ ಮೃತ ಶಿಶುಗಳ ಸಂಬಂಧಿಕರು ಆಸ್ಪತ್ರೆಯಲ್ಲಿ 3 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಕಡಿತ ಉಂಟಾಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಛತ್ತೀಸಗಢ ರಾಜ್ಯಪಾಲ ಅನುಸೂಯಾ ಉಯ್ಕೆ, ಪ್ರಕರಣದ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಂಡು, ಮೃತ ಶಿಶುಗಳ ಕುಟುಂಬಕ್ಕೆ ಪರಿಹಾರ ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Jenavac JE vaccine: ಮೆದುಳು ಜ್ವರ ಲಸಿಕೆ ಪಡೆದ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Newborns death: Death of 4 newborns due to power cut in hospital: Govt orders probe

Comments are closed.