NIA – Lokayukta attack in Karnataka : ಕರ್ನಾಟಕದಲ್ಲಿ ಎನ್ಐಎ ದಾಳಿಯ ಬೆನ್ನಲ್ಲೇ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆಗಳಲ್ಲಿ ಎನ್‌ಐಎ ದಾಳಿ (NIA, Lokayukta attack in Karnataka) ನಡೆಸಿದೆ. ಇನ್ನೊಂದೆಡೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಕೂಡ ನಡೆಸಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ ಎನ್ನುವುದನ್ನು ಈ ಕೇಲಘೆ ಸಂಪೂರ್ಣವಾಗಿ ತಿಳಿಸಿದೆ.

ಬೆಂಗಳೂರು, ತುಮಕೂರು, ಮೈಸೂರು, ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕಕ್ತ ಅಧಿಕಾರಿಗಳು ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆಂದು ವರದಿ ಆಗಿದೆ. ಇನ್ನು ಅಧಿಖಾರಿಗಳು ಆದಯಾ ಮೀರಿ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಆದಾಯದ ಮೂಲ, ಆಸ್ತಿ ಪತ್ರಗಳು , ಬ್ಯಾಂಕ್‌ ವಿವರಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ ಎಂದು ಹೇಳಿದರು.

ಎಲ್ಲೆಲ್ಲಿ ಲೋಕಾಯುಕ್ತ ದಾಳಿ ?
ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ನಗರದ ಆರ್‌.ಟಿ.ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್‌ಪಿಗಳಾದ ಮುಂಜುನಾಥ್‌ ಹಾಗೂ ಹರೀಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೆಯೇ ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆಸಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್‌ ವಾಗೀಶ್‌ ಶೆಟ್ಟರ್‌ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ರಅಣೆಬೆನ್ನೂರು ನಗರದ ನಿವಾಸ, ಹಾವೇರಿಯ ದೇವಗರಿಯ ಡಿಸಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ರಾಜಧಾನಿಯಾದ ಬೆಂಗಳೂರಿನ ಎರಡು ಕಡೆ ಬೆಳ್ಳಂಬೆಳಗ್ಗೆ ಲೋಕಾಯಕ್ತ ಅಧಿಖಾರಿಗಳು ನಡೆಸಿದ್ದಾರೆ. ನಗರದ ಬಸವೇಶ್ವರನಗರದಲ್ಲಿ ಇರುವ ಬೆಸ್ಕಾಂ ಟೆಕ್ನಿಕಲ್‌ ಡೈರೆಕ್ಟರ್‌ ರಮೇಶ್‌ ಮನೆ ಮೇಲೆ ದಾಳಿ ಆಗಿದೆ. ಇನ್ನು ಇಂಡಸ್ಟ್ರೀಸ್‌ ಅಂಡ್‌ ಬಾಯ್ಲರ್‌ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ಮಾಡಿದ್ದಾರೆ. ಎಂದು ತಿಳಿದು ಬಂದಿದೆ.

ಮೈಸೂರಿನ ನಿವೇದಿತಾ ನಗರದ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್‌ ಕುಮಾರ್‌ ನಿವಾಸದ ಮೇಲೆ ದಾಳಿ ಆಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು ೧೩ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಿದೆ.

ಇದನ್ನೂ ಓದಿ : Delhi Sakshi Murder : 16 ವರ್ಷದ ಪ್ರೇಯಸಿಯನ್ನು ಕೊಲೆಗೆ 15 ದಿನ ಹಿಂದೆ ಚಾಕು ಖರೀದಿಸಿದ್ದ ಪ್ರೇಮಿ ಸಾಹಿಲ್‌

ಬೀದರ್‌ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಜ್ತ ಅಧಿಖಾರಿಗಳು ದಾಳಿ ನಡೆಸಿದ್ದಾರೆ. ಬೀದರ್‌, ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್‌ ಹೌಸ್‌ ಮೇಲೂ ಲೋಕಾಯುಕ್ತ ಡಿವೈಎಸ್‌ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

NIA – Lokayukta attack in Karnataka: Lokayukta attack in Karnataka after the NIA attack

Comments are closed.