ಶಿವಮೊಗ್ಗ : ಯುವಕನೋರ್ವ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ವಿದ್ಯಾರ್ಥಿನಿ ಪ್ರೀತಿಗೆ ನಿರಾಕರಿಸಿದ್ದಾಳೆ. ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದಿದ್ದ ಯುವಕ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆಯ ಬಳಿಯಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಕುರಿತು ಪೋಷಕರು ನಗರದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ನಾಪತ್ತೆ ಪ್ರಕರಣದ ಜಾಡು ಹಿಡಿದು ಹೊರ ಪೊಲೀಸರಿಗೆ ವಿದ್ಯಾರ್ಥಿನಿ ಕೊಲೆಯಾಗಿರೋ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ತಳಲೆ ಗ್ರಾಮದ ಶಿವಮೂರ್ತಿ ( 22 ವರ್ಷ) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.
ವಿಚಾರಣೆಯ ವೇಳೆಯಲ್ಲಿ ಶಿವಮೂರ್ತಿ ಯುವತಿಯನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನರ್ಸಿಂಗ್ ವಿದ್ಯಾರ್ಥಿನಿಯನ್ನು ಶಿವಮೂರ್ತಿ ಪ್ರೀತಿಸುತ್ತಿದ್ದ. ನೆರಲಿಗೆ ಕಾಡಿಗೆ ವಿದ್ಯಾರ್ಥಿನಿಯನ್ನು ಕರೆದೊಯ್ದಿದ್ದ ಶಿವಮೂರ್ತಿ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ಆದರೆ ವಿದ್ಯಾರ್ಥಿನಿ ಪ್ರೀತಿಯನ್ನು ನಿಕಾರಿಸಿದ್ದಾಳೆ. ಈ ವೇಳೆಯಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಚೂಡಿದಾರ್ ವೇಲ್‌ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.
ನಂತರ ಶಿವಮೂರ್ತಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಕುರಿತು ರಿಪ್ಪನ್‌ಪೇಟೆ ಠಾಣೆಯ ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.