Oil tanker-bus accident: ತೈಲ ಟ್ಯಾಂಕರ್-ಬಸ್ ಢಿಕ್ಕಿ : 27 ಮಂದಿಗೆ ಗಾಯ

ಪುರ್ಬಾ : (Oil tanker-bus accident) ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ-ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ 27 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದ್ದು, 15 ಮಂದಿಯ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ.

ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಡುವೆ ಢಿಕ್ಕಿ ಸಂಭವಿಸಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ ನಲ್ಲಿದ್ದ 27 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅದರಲ್ಲಿ 15 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದ್ದು, ಅಲ್ಲಿ 12 ಮಂದಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಿ ತಕ್ಷಣವೇ ಬಿಡುಗಡೆ ಮಾಡಲಾಗಿದೆ.

ಆದರೆ, ಉಳಿದ 15 ಮಂದಿ ಗಾಯಳುಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ, ಕ್ರಾಸಿಂಗ್ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿತ್ತು ಎನ್ನಲಾಗಿದೆ. ಅಪಘಾತ ಸಂಭವಿಸಿದ್ದರಿಂದ ಸಂಚಾರದಲ್ಲಿ ಕೂಡ ಅಡೆತಡೆ ಸೃಷ್ಟಿಯಾಗಿದೆ. ಇನ್ನೂ ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ : Moral Police Giri: ಮಂಗಳೂರಿನಲ್ಲಿ ಹೋಳಿ ಆಚರಣೆ : ಭಜರಂಗದಳ ಕಾರ್ಯಕರ್ತರಿಂದ ದಾಳಿ

ಇದನ್ನೂ ಓದಿ : ALH Dhruva helicopter crash: ಕೋಸ್ಟ್ ಗಾರ್ಡ್ ನ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನ

ಇದನ್ನೂ ಓದಿ : Suicide by poisoning: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ

Oil tanker-bus accident: Oil tanker-bus collision: 27 injured

Comments are closed.