ಶ್ರೀಗಂಧ ಕಳ್ಳರಿಗೆ ಗುಂಡೇಟು : ಓರ್ವ ಸಾವು, ಮೂವರು ಎಸ್ಕೇಪ್‌

ತುಮಕೂರು : ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರಗಳನ್ನು ಕಳವು ಮಾಡಲು ಯತ್ನಿಸಿದ ಶ್ರೀಗಂಧ ಕಳ್ಳರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಓರ್ವ ಸಾವನ್ನಪ್ಪಿದ್ದು, ಮೂವರು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನಲ್ಲಿ ನಡೆದಿದೆ.

ಕುಣಿಗಲ್‌ ತಾಲೂಕಿನ ಕಂಬಲಪುರ ಮೀಸಲು ಅರಣ್ಯದಲ್ಲಿ ಶ್ರೀಗಂಧ ಬೆಳೆಯಲಾಗಿದೆ. ಶ್ರೀಗಂಧ ಮೀಸಲು ಅರಣ್ಯದಲ್ಲಿ ಶ್ರುಕ್ರವಾರದಿಂದಲೇ ಕಳ್ಳರು ನುಗ್ಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯದಲ್ಲಿ ಶೋಧಕಾರ್ಯ ನಡೆಸಿದ್ದರು ಕಳ್ಳರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ಮತ್ತೆ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಕಳ್ಳರು ಶ್ರೀಗಂಧದ ಮರ ಕಳವು ಮಾಡುತ್ತಿರುವುದು ಪತ್ತೆಯಾಗಿದೆ.

ಅರಣಾಧಿಕಾರಿ ಮಹೇಶ್‌ ಅವರ ನೇತೃತ್ವದ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ಮಾಡುತ್ತಲೇ ಮೂವರು ಶ್ರೀಗಂಧ ಕಳ್ಳರು ಪರಾರಿಯಾಗಿದ್ದಾರು. ಓರ್ವ ಶ್ರೀಗಂಧ ಕಳ್ಳ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೇಲೆಯೇ ದಾಳಿ ನಡೆಸೋದಕ್ಕೆ ಮುಂದಾಗಿದ್ದಾನೆ. ಅರಣ್ಯ ಇಲಾಖೆಯ ಸಿಬ್ಬಂದಿ ಶೇಖರ್‌ ಎಂಬವರು ಹಲ್ಲೆಗೆ ಒಳಗಾಗಿದ್ದಾರೆ.

ಈ ವೇಳೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರೀಗಂಧ ಕಳ್ಳನ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಎಫ್‌ಓ ರಮೇಶ್‌, ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹುಲಿಯೂರು ದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಅಲ್ಲದೇ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣ ತನಿಖೆಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಒಟ್ಟಿನಲ್ಲಿ ಶ್ರೀಗಂಧ ಕಳವು ಮಾಡಲು ಬಂಧ ಕಳ್ಳನೀಗ ಬಾರದ ಲೋಕಕ್ಕೆ ಪಯಣಿಸಿದ್ದಾನೆ.

Comments are closed.