Panna accident: ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ: ಕೇರಳದ 16 ವಿದ್ಯಾರ್ಥಿಗಳಿಗೆ ಗಾಯ

ಪನ್ನಾ: (Panna accident) ಕೇರಳದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, ವಾಹನದ ಸಹಾಯಕ ಮೃತಪಟ್ಟು 16 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.ಜಿಲ್ಲಾ ಕೇಂದ್ರದಿಂದ ಸುಮಾರು 150 ಕಿಮೀ ದೂರದಲ್ಲಿರುವ ಕುಖೇಡಾ ಗ್ರಾಮದ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ರಾಯಪುರ ಪೊಲೀಸ್ ಠಾಣೆಯ ಉಸ್ತುವಾರಿ ಸುಧೀರ್ ಬೈಗಿ ತಿಳಿಸಿದ್ದಾರೆ.

ಕ್ಷೇತ್ರ ಭೇಟಿ ಕಾರ್ಯಕ್ರಮದಡಿ ತ್ರಿಶೂರ್‌ನ ಕಾಲೇಜೊಂದರಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಧ್ಯಪ್ರದೇಶದ ಕಟ್ನಿಗೆ ಹೋಗುತ್ತಿದ್ದಾಗ ಪಲ್ಟಿ ಹೊಡೆದಿದೆ.ಪರಿಣಾಮ ವಾಹನದ ಸಹಾಯಕ ಸಾವನ್ನಪ್ಪಿದ್ದು, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 16 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ರಾಯ್‌ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಶಾಹನಗರ ಪ್ರದೇಶದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರಚನಾ ಶರ್ಮಾ ತಿಳಿಸಿದ್ದಾರೆ.

ಇನ್ನೂ ತಲೆಗೆ ಪೆಟ್ಟು ಬಿದ್ದ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಬಲ್‌ಪುರಕ್ಕೆ ಕಳುಹಿಸಲಾಗಿದೆ. ಕಾಲಿಗೆ ಗಾಯ ಮಾಡಿಕೊಂಡಿರುವ ಮತ್ತೊಬ್ಬರು ಜಬಲ್‌ಪುರಕ್ಕೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳು ಕೇರಳದಿಂದ ಸಾಗರ್‌ನ ಹರಿಸಿಂಗ್ ಗೌರ್ ವಿಶ್ವವಿದ್ಯಾಲಯಕ್ಕೆ ಬಂದಿದ್ದರು ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮದ ಭಾಗವಾಗಿ ಕಟ್ನಿಗೆ ಹೋಗುತ್ತಿದ್ದರು ಎಂದು ಅಧಿಕಾರಿಗಳು ಹೇಳಿದರು.

ಇದನ್ನೂ ಓದಿ : ಹಿಂಸಾಚಾರಕ್ಕೆ ತಿರುಗಿದ ಶಿವರಾತ್ರಿ ಆಚರಣೆ:ಎರಡು ಗುಂಪುಗಳ ನಡುವೆ ಘರ್ಷಣೆ: 14 ಮಂದಿಗೆ ಗಾಯ

ಮಂಜು ಕವಿದ ಎಕ್ಸ್‌ ಪ್ರೆಸ್‌ ವೇ ನಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

“ಇಂದು, ಬೆಳಿಗ್ಗೆ 8 ಗಂಟೆಯ ಸುಮಾರಿಗೆ, ದಟ್ಟವಾದ ಮಂಜಿನಿಂದಾಗಿ, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳು ಪರಸ್ಪರ ಡಿಕ್ಕಿ ಹೊಡೆದವು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಪ್ರಸ್ತುತ ಸಂಚಾರ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಎಡಿಸಿಪಿ ಟ್ರಾಫಿಕ್ ತಿಳಿಸಿದ್ದಾರೆ.ಪೊಲೀಸರ ಪ್ರಕಾರ ಡಿಕ್ಕಿ ಹೊಡೆದ ಬಹುತೇಕ ವಾಹನಗಳು ಕಾರುಗಳಾಗಿವೆ. ಆರಂಭದಲ್ಲಿ ಡಿಕ್ಕಿ ಹೊಡೆದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ : Noida serial accident: ಮಂಜು ಕವಿದ ಎಕ್ಸ್‌ ಪ್ರೆಸ್‌ ವೇ ನಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

ಇದನ್ನೂ ಓದಿ : Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾ

Panna accident: Bus carrying students overturns: 16 students from Kerala injured

Comments are closed.