Physician negligence : ವೈದ್ಯರ ನಿರ್ಲಕ್ಷಕ್ಕೆ ಗರ್ಭಿಣಿ, ಅವಳಿ ಶಿಶು ಸಾವು ; ಸರಕಾರದಿಂದ ಮಾರ್ಗಸೂಚಿ ಪ್ರಕಟ

ತುಮಕೂರು : (Physician negligence) ವೈದ್ಯರ ನಿರ್ಲಕ್ಷಕ್ಕೆ ಅವಳಿ ಮಕ್ಕಳು ಹಾಗೂ ತಾಯಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯವೇ(Physician negligence) ಕಾರಣ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ತುಮಕೂರಿನ ಭಾರತಿನಗರದ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಾಸವಾಗಿದ್ದ ಅನಾಥ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಸ್ಥಳೀಯರು ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು . ಮಹಿಳೆಯೊಂದಿಗೆ ಪಕ್ಕದ ಮನೆಯ ವೃದ್ದೆಯೊಬ್ಬರು ಕೂಡ ತೆರಳಿದ್ದರು. ಆಕೆಯ ಬಳಿ ಆಧಾರ್‌ ಕಾರ್ಡ್‌ ಹಾಗೂ ತಾಯಿ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಯಿಂದ ವಾಪಾಸ್ ಕಳುಹಿಸಿದ್ದರು. ವೈದ್ಯರ ಬಳಿ ಅಂಗಲಾಚಿ ಬೇಡಿಕೊಂಡರು ವೈದ್ಯೇ ನಿರ್ಲಕ್ಷ್ಯ(Physician negligence)ತೋರಿದ್ದರು . ಈ ಕಾರಣದಿಂದ ತಾಯಿ ಹಾಗೂ ಅವಳಿ ಶಿಶುಗಳು ಸೇರಿ ಮೂವರು ಕೊನೆಯುಸಿರೆಳೆದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಗರ್ಭಿಣಿ ಹೆಂಗಸಿಗೆ ಚಿಕಿತ್ಸೆ ಕೊಡುವ ಬದಲಾಗಿ ಆಸ್ಪತ್ರೆಗೆ ಹಾಗೂ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ.ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಬರೆದು ಕೊಡುತ್ತೇವೆ ಅಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ವೈದ್ಯರು ತಿಳಿಸಿದ್ದರು. ಆದರೆ ಮಹಿಳೆಯ ಬಳಿಯಲ್ಲಿ ಹಣ ಇಲ್ಲದ ಕಾರಣಕ್ಕೆ ಆಕೆ ಮನೆಗೆ ವಾಪಸ್ಸಾಗಿದ್ದರು. ಅನಾರೋಗ್ಯದ ನಡುವೆ ಬೆಳಗ್ಗಿನ ಜಾವ ಮಹಿಳೆ ಒಂದು ಮಗುವಿಗೆ ಜನ್ಮ ನೀಡಿದ್ದು , ಇನ್ನೊಂದು ಮಗುವಿಗೆ ಜನ್ಮ ನೀಡುವ ಸಮಯದಲ್ಲಿ ತೀವ್ರ ರಕ್ತಸ್ರಾವವಾಗಿ ತಾಯಿ ಹಾಗೂ ಅವಳಿ ಮಕ್ಕಳು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : Honnali Chandrashekar Death : ಹೊನ್ನಾಳಿ : ಚಂದ್ರಶೇಖರ್ ಸಾವು, ಕೊಲೆ ಪ್ರಕರಣ ದಾಖಲು

ಮೃತ ಮಹಿಳೆ ಕಸ್ತೂರಿ ಮೂಲತಃ ತಮಿಳುನಾಡಿನವರು. ಕಳೆದ ಒಂದು ತಿಂಗಳಿಂದ ಭಾರತಿನಗರದಲ್ಲಿ ವಾಸವಿದ್ದರು. ಮೃತ ಮಹಿಳೆ ಇಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಗರ್ಭಿಣಿ ಹಾಗೂ ಇಬ್ಬರು ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಆರೋಗ್ಯಾಧಿಕಾರಿ ಮಂಜುನಾಥ್‌ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಸ್ಥಳೀಯರು ಅರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಸಸ್ಪೆಂಡ್‌ ಮಾಡುವುದಾಗಿ ಆಗ್ರಹಿಸಿದ್ದಾರೆ. ಅಲ್ಲದೇ ಡಾ. ಉಷಾ ಹಾಗೂ ಸಿಬ್ಬಂದಿಗಳನ್ನು ಅಮಾನತುಗೊಳಿಸುವವರೆಗೂ ಶವಗಳನ್ನು ತೆಗೆಯಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟುಹಿಡಿದಿದ್ದಾರೆ .

ಇದನ್ನೂ ಓದಿ : Assault by head : ಸಿದ್ದಾಪುರ : ಕ್ಷಮೆ ಕೇಳಲು ಕೊರಗಜ್ಜನ ಸನ್ನಿಧಿಗೆ ಕರೆಯಿಸಿ ತಲವಾರಿನಿಂದ ಹಲ್ಲೆ

ಈ ಬಗ್ಗೆ ಮಂಜುನಾಥ್‌ ಅವರು ,ಜಿಲ್ಲಾಸ್ಪತ್ರೆಯಲ್ಲಿ ಸಂಬಂಧಪಟ್ಟ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಸಸ್ಪೆಂಡ್‌ ಮಾಡಿರುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೆರಿಗೆ ಮಾಡಿಸಲು ಆಧಾರ್​, ತಾಯಿ ಕಾರ್ಡ್ ಕಡ್ಡಾಯವಲ್ಲ. ಈ ಸಂಬಂಧ ಮಾಹಿತಿ ಪಡೆದು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಡಾ. ಉಷಾ ಹಾಗೂ ಇಬ್ಬರು ಸಿಬ್ಬಂದಿಯರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಕುಂದಾಪುರ : 24 ಗಂಟೆಯಲ್ಲಿ ಕಾಲೇಜು ವಿದ್ಯಾರ್ಥಿಯ ಅಪಹರಣ ಪ್ರಕರಣ ಬೇಧಿಸಿದ ಪೊಲೀಸರು

ಆರೋಗ್ಯ ಇಲಾಖೆಯ ಹೊಸ ಮಾರ್ಗಸೂಚಿಯಲ್ಲೇನಿದೆ ?
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ಬಾಣಂತಿ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹೊಸ ಮಾರ್ಗಸೂಚಿಯ ಪ್ರಕಾರ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಪಡಿತರ ಕಾರ್ಡ್ ಸೇರಿದಂತೆ ಯಾವುದೇ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಅವಶ್ಯಕತೆಯಿಲ್ಲ ಎಂದಿದೆ.

(Physician negligence) A heartbreaking incident in which twins and their mother died due to doctor’s negligence took place in the district hospital of Tumkur. It has been alleged that the reason for the death of pregnant women and twins is the negligence of the district hospital (Physician negligence). Following the incident, the health department issued new guidelines.

Comments are closed.