ಸೋಮವಾರ, ಏಪ್ರಿಲ್ 28, 2025
HomeCrimeStudent Suicide : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕ ಅರೆಸ್ಟ್‌

Student Suicide : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕ ಅರೆಸ್ಟ್‌

- Advertisement -

ಚೆನ್ನೈ: ಇತ್ತೀಚಿನ ದಿನಗಳ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಅದ್ರಲ್ಲೂ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಲೈಂಗಿಕ ಕಿರಕುಳ ನಡೆದಿದ್ದು, ಇದರಿಂದ ಮನನೊಂದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

12ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಾಲೆಯ ಭೌತಶಾಸ್ತ್ರ ಶಿಕ್ಷಕನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದಾಗಿ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ದಾಖಲು ಮಾಡಿಕೊಂಡಿರುವ ಕೊಯಮತ್ತೂರು ಠಾಣೆಯ ಪೊಲೀಸರು ಆರೋಪಿ ಶಿಕ್ಷಕನ ಜೊತೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಶಿಕ್ಷಕರ ನಡುವೆ ನಡೆದಿರುವ ವಾಟ್ಸಾಪ್‌ ಚಾಟ್‌ ಹಾಗೂ ಆಡಿಯೋ ವೈರಲ್‌ ಆಗಿತ್ತು. ಇದು ಸಾರ್ವಜನಿ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಡಿಯೋ ಹಾಗೀ ಚಾಟ್‌ಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ಇಂತಹ ಕೃತ್ಯ ನಡೆದಿರುವುದಕ್ಕೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶಾಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಅಪರಾಧಿಯನ್ನು ಕಾನೂನಿ ಮುಂದೆ ಹಾಜರು ಪಡಿಸುತ್ತೇವೆ ಎಂದಿದ್ದಾರೆ.

ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ತಿಳಿದಿದ್ದರೂ ಕೂಡ ಆಡಳಿತ ಮಂಡಳಿ ಪ್ರಕರಣವನ್ನು ಮುಚ್ಚಿಟ್ಟಿತ್ತು ಅನ್ನೋ ಆರೋಪವೂ ಕೇಳಿಬರುತ್ತಿದೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಕೊಯಮತ್ತೂರು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅಲ್ಲದೇ ಶಾಲೆಯ ಶಿಕ್ಷಕರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ : Crime News : ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗಿದ ತಂದೆ

ಇದನ್ನೂ ಓದಿ : Wall Collapse : ಕುಸಿದ ಗೋಡೆ : ಮಲಗಿದ್ದ ದಂಪತಿಯ ಜೀವಂತ ಸಮಾಧಿ

(Physics Teachers Arrested After Student Suicide in Coimbatore)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular