ಕಾರಿನಲ್ಲಿ ಅಕ್ರಮ ಗೋ ಸಾಗಾಟ : ಪೊಲೀಸರಿಂದ ಫೈರಿಂಗ್

0

ಮಂಗಳೂರು : ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾರಿನಲ್ಲಿದ್ದ ದುಷ್ಕರ್ಮಿಗಳು ಕಾರುಬಿಟ್ಟು ಪರಾರಿಯಾಗಿದ್ರೆ, ಪೊಲೀಸರು 6 ಹಸುಗಳನ್ನು ರಕ್ಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಸಮೀಪದ ಶಿರ್ತಾಡಿಯ ಔದಾಲ್ ಎಂಬಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಗಸ್ತು ನಿರತರಾಗಿದ್ದ ವೇಳೆಯಲ್ಲಿ ಗೋವುಗಳನ್ನು ತುಂಬಿಸಿಕೊಂಡಿದ್ದ ಕಾರು ಬಂದಿದೆ. ಈ ವೇಳೆಯಲ್ಲಿ ದುಷ್ಕರ್ಮಿಗಳು ಪೊಲೀಸರ ಜೀಪಿಗೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಸಂಶಯಗೊಂಡ ಪೊಲೀಸ್ ಇನ್ ಸ್ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಪೊಲೀಸರು ಫೈರಿಂಗ್ ಮಾಡುತ್ತಿದ್ದಂತೆಯೇ ಹೆದರಿದ ದುಷ್ಕರ್ಮಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಕಾರಿನಲ್ಲಿ 6 ದನಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಭದ್ರತೆಯನ್ನು ಕೈಗೊಂಡಿದ್ದಾರೆ.

Leave A Reply

Your email address will not be published.