ಸೋಮವಾರ, ಏಪ್ರಿಲ್ 28, 2025
HomeCoastal NewsPraveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ, ಶರಣಾಗದಿದ್ರೆ ಆರೋಪಿಗಳ ಮನೆ ಜಪ್ತಿ...

Praveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ, ಶರಣಾಗದಿದ್ರೆ ಆರೋಪಿಗಳ ಮನೆ ಜಪ್ತಿ : ಎನ್‌ಐಎ

- Advertisement -

ಸುಳ್ಯ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ (Praveen Nettaru murder case) ತನಿಖೆ ಚುರುಕುಗೊಂಡಿದೆ. ಪ್ರಕರಣದ ಆರೋಪಿಗಳಾಗಿರುವ ಉಮ್ಮರ್‌ ಫಾರೂಕ್‌ ಹಾಗೂ ಬೆಳ್ಳಾರೆಯ ಮುಸ್ತಫಾ ಅವರ ಬಂಧನಕ್ಕೆ ಎನ್‌ಐಎ ಅಧಿಕಾರಿಗಳು ಶರಣಾಗತಿಗೆ ಸೂಚಿಸಿದ್ದಾರೆ. ಇಬ್ಬರು ಆರೋಪಿಗಳು ಶರಣಾಗದೇ ಇದ್ರೆ ಆರೋಪಿಗಳ ಮನೆ ಜಪ್ತಿಗೆ ಎನ್‌ಐಎ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಲಾರೆಯಲ್ಲಿ 2022 ರ ಜುಲೈ 26 ರಂದು ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳ ವಿರುದ್ದ ಎನ್‌ಐಎ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಈ ಪೈಕಿ ಐವರು ಆರೋಪಿಗಳು ತಲೆ ಮರೆಯಿಸಿಕೊಂಡಿದ್ದಾರೆ. ಇದೀಗ ಇಬ್ಬರು ಆರೋಪಿಗಳ ಬಂಧನಕ್ಕಾಗಿ ಎನ್‌ಐಎ ಅಧಿಕಾರಿಗಳು ಆರೋಪಿಗಳು ಶರಣಾಗದಿದ್ರೆ ಮನೆ ಜಪ್ತಿ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ : Hubballi pillar collapse : ಹುಬ್ಬಳ್ಳಿ : ಜನನಿಬಿಡ ರಸ್ತೆಯ ಮಧ್ಯೆ ಕುಸಿದ ಕಬ್ಬಿಣದ ಪಿಲ್ಲರ್

ಇದನ್ನೂ ಓದಿ : Bakrid 2023 : ಬಕ್ರೀದ್‌ ಹಿನ್ನೆಲೆ ಅನಧಿಕೃತ ಪ್ರಾಣಿಗಳ ವಧೆ ಮೇಲೆ ಕಣ್ಗಾವಲು : ಉಡುಪಿ ಡಿಸಿ ಸೂಚನೆ

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಎನ್‌ಐಎ ಅಧಿಕಾರಿಗಳು ಹಲವು ಆರೋಪಿಗಳನ್ನು ಬಂಧಿಸಿದ್ದರು.

Praveen Nettaru murder case: Praveen Nettaru’s murder, house of accused seized after surrender: NIA

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular