ಕಲಬುರಗಿ : 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ(psi appointment scam) ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿದೆ. ಈ ಪ್ರಕರಣದ ಅಡಿಯಲ್ಲಿ ನಿನ್ನೆ ಸಿಐಡಿ ಅಧಿಕಾರಿಗಳು ಕಲಬುರಗಿಯ ಅಫಜಲಪುರದಲ್ಲಿ ಅಕ್ರಮ ಕೇಸ್ನ ಕಿಂಗ್ಪಿನ್ ರುದ್ರೇಗೌಡ ಪಾಟೀಲ್ ಸಹೋದರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್ ಪಾಟೀಲ್ನನ್ನು ಕುತ್ತಿಗೆ ಪಟ್ಟಿ ಹಿಡಿದು ಎಳೆದು ತಂದಿದ್ದರು. ಇದಾದ ಬಳಿಕ ಅಜ್ಞಾತ ಸ್ಥಳದಲ್ಲಿದ್ದ ರುದ್ರೇಗೌಡ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಒಬ್ಬೊಬ್ಬರನ್ನೂ ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆದರೆ ಇಂದು ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಐಡಿ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಸೊಲ್ಹಾಪುರದಲ್ಲಿ ಕಾರ್ಯಾಚರಣೆ ನಡೆಸಿದ ಸಿಐಡಿ ಅಧಿಕಾರಿಗಳು 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಶಂಕಿಸಲಾದ ರುದ್ರೇಗೌಡ ಪಾಟೀಲ್ನನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಲಬುರಗಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬುದು ಒಂದೆಡೆಯಾದರೆ ಈ ಪ್ರಕರಣ ಸಂಬಂಧ ಮತ್ತೊಂದು ಬಾಂಬ್ ಸಿಡಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಶೀಘ್ರದಲ್ಲಿಯೇ ಪರೀಕ್ಷೆ ಬರೆಯಬೇಕಿದ್ದ 402 ಪಿಎಸ್ಐ ಹುದ್ದೆಯಲ್ಲಿಯೂ ಅಕ್ರಮವಾಗಿ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಇಬ್ಬರು ಸಂಭಾಷಣೆ ನಡೆಸುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ಇಂದು ಆರ್.ಟಿ ನಗರ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಆಡಿಯೋದಲ್ಲಿ ಸಂಭಾಷಣೆ ನಡೆಸುತ್ತಿರುವವರು ಯಾರು ಎಂಬುದನ್ನು ಶೀಘ್ರದಲ್ಲಿಯೇ ಪತ್ತೆ ಮಾಡುತ್ತೇವೆ. ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದನ್ನು ಓದಿ : JDS: 2023 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಎಲ್ಲವೂ ಸುಲಭವಿಲ್ಲ: ಆಮ್ ಆದ್ಮಿ, ಎನ್‌ಸಿಪಿ ಸ್ಪರ್ಧೆಗೆ ಇಳಿಯಲಿದೆ
ಇದನ್ನೂ ಓದಿ : DK Shivakumar : ನನ್ನ ಹೆಸರು ಕೇಳಿದರೆ ಕೆಲವರಿಗೆ ಶಕ್ತಿ ಬರುತ್ತೆ : ಡಿ.ಕೆ ಶಿವಕುಮಾರ್ ವ್ಯಂಗ್ಯ
psi appointment scam king pin taken into custody