psi appointment scam : ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್​ ಪಿನ್​ ರುದ್ರೇಗೌಡ ವಶಕ್ಕೆ

ಕಲಬುರಗಿ : 545 ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ(psi appointment scam) ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿದೆ. ಈ ಪ್ರಕರಣದ ಅಡಿಯಲ್ಲಿ ನಿನ್ನೆ ಸಿಐಡಿ ಅಧಿಕಾರಿಗಳು ಕಲಬುರಗಿಯ ಅಫಜಲಪುರದಲ್ಲಿ ಅಕ್ರಮ ಕೇಸ್​ನ ಕಿಂಗ್​ಪಿನ್​ ರುದ್ರೇಗೌಡ ಪಾಟೀಲ್​​ ಸಹೋದರ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಮಹಂತೇಶ್​ ಪಾಟೀಲ್​​ನನ್ನು ಕುತ್ತಿಗೆ ಪಟ್ಟಿ ಹಿಡಿದು ಎಳೆದು ತಂದಿದ್ದರು. ಇದಾದ ಬಳಿಕ ಅಜ್ಞಾತ ಸ್ಥಳದಲ್ಲಿದ್ದ ರುದ್ರೇಗೌಡ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಒಬ್ಬೊಬ್ಬರನ್ನೂ ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆದರೆ ಇಂದು ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಐಡಿ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಪ್ರಕರಣದ ಕಿಂಗ್​ ಪಿನ್​ ರುದ್ರೇಗೌಡನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಮಹಾರಾಷ್ಟ್ರದ ಸೊಲ್ಹಾಪುರದಲ್ಲಿ ಕಾರ್ಯಾಚರಣೆ ನಡೆಸಿದ ಸಿಐಡಿ ಅಧಿಕಾರಿಗಳು 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಶಂಕಿಸಲಾದ ರುದ್ರೇಗೌಡ ಪಾಟೀಲ್​ನನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಲಬುರಗಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.


545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬುದು ಒಂದೆಡೆಯಾದರೆ ಈ ಪ್ರಕರಣ ಸಂಬಂಧ ಮತ್ತೊಂದು ಬಾಂಬ್​ ಸಿಡಿಸಿರುವ ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಶೀಘ್ರದಲ್ಲಿಯೇ ಪರೀಕ್ಷೆ ಬರೆಯಬೇಕಿದ್ದ 402 ಪಿಎಸ್​ಐ ಹುದ್ದೆಯಲ್ಲಿಯೂ ಅಕ್ರಮವಾಗಿ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಇಬ್ಬರು ಸಂಭಾಷಣೆ ನಡೆಸುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ಇಂದು ಆರ್​.ಟಿ ನಗರ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಆಡಿಯೋದಲ್ಲಿ ಸಂಭಾಷಣೆ ನಡೆಸುತ್ತಿರುವವರು ಯಾರು ಎಂಬುದನ್ನು ಶೀಘ್ರದಲ್ಲಿಯೇ ಪತ್ತೆ ಮಾಡುತ್ತೇವೆ. ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದನ್ನು ಓದಿ : JDS: 2023 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಎಲ್ಲವೂ ಸುಲಭವಿಲ್ಲ: ಆಮ್ ಆದ್ಮಿ, ಎನ್‌ಸಿಪಿ ಸ್ಪರ್ಧೆಗೆ ಇಳಿಯಲಿದೆ

ಇದನ್ನೂ ಓದಿ : DK Shivakumar : ನನ್ನ ಹೆಸರು ಕೇಳಿದರೆ ಕೆಲವರಿಗೆ ಶಕ್ತಿ ಬರುತ್ತೆ : ಡಿ.ಕೆ ಶಿವಕುಮಾರ್ ವ್ಯಂಗ್ಯ

psi appointment scam king pin taken into custody

Comments are closed.