ಕಲಬುರಗಿ :psi exam scam : ರಾಜ್ಯದಲ್ಲಿ ಬಹುದೊಡ್ಡ ಸಂಚಲನವನ್ನೇ ಸೃಷ್ಟಿಸಿರುವ ಪಿಎಸ್ಐ ನೇಮಕಾತಿ ಅಕ್ರಮ ಪ್ರಕಣದಲ್ಲಿ ಈಗಾಗಲೇ ಸಾಕಷ್ಟು ಮಂದಿಯ ಬಂಧನವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಮಂಜುನಾಥ್ ಮೇಳಕುಂದಿ ಹಾಗೂ ಜ್ಞಾನಜ್ಯೋತಿಯ ಮುಖ್ಯೋಪಾಧ್ಯಾಯ ಕಾಶಿನಾಥ್ ಎಂಬವರು ತಾವಾಗಿಯೇ ಸಿಐಡಿ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಕಿಂಗ್ಪಿನ್ ಮಂಜುನಾಥ ಮೇಳಕುಂದಿ ಹಾಗೂ ಶ್ರೀಧರ್ ಪವಾರ್ನ್ನು ನ್ಯಾಯಾಲಯವು ಮುಂದಿನ ಮೂರು ದಿನಗಳ ಸಿಐಡಿ ಕಸ್ಟಡಿಗೆ ನೀಡಿದೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಕಿಂಗ್ಪಿನ್ ಮಂಜುನಾಥ ಮೇಳಕುಂದಿ ಕಳೆದ 21 ದಿನಗಳಿಂದ ಸಿಐಡಿ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದ . ಆದರೆ ನಿನ್ನೆ ಸ್ವಯಂಪ್ರೇರಿತನಾಗಿ ಸಿಐಡಿ ಮುಂದೆ ಹಾಜರಾಗಿದ್ದ. ಮತ್ತೊಬ್ಬ ಆರೋಪಿ ಶ್ರೀಧರ್ ಪವಾರ್ನನ್ನು ಸಿಐಡಿ ಅಧಿಕಾರಿಗಳೇ ಬಂಧಿಸಿದ್ದರು. ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇಬ್ಬರೂ ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಬೇಕಾದ್ದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಅದೇ ರೀತಿ ಮೂರನೇ ಜೆಎಂಎಫ್ಸಿ ನ್ಯಾಯಾಲಯವು ಮುಂದಿನ ಮೂರು ದಿನಗಳ ಕಾಲ ಆರೋಪಿಗಳಾದ ಕಿಂಗ್ಪಿನ್ ಮಂಜುನಾಥ ಮೇಳಕುಂದಿ ಹಾಗೂ ಶ್ರೀಧರ್ ಪವಾರ್ನ್ನು ಸಿಐಡಿ ಕಸ್ಟಡಿಗೆ ನೀಡಿದೆ.
ಇದನ್ನು ಓದಿ : Shawarma death : ಕಾಸರಗೋಡಲ್ಲಿ ಶವರ್ಮ ತಿಂದು ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ
ಇದನ್ನೂ ಓದಿ : ಕುಂದಾಪುರ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
psi exam scam accused manjunath sridhar given to cid custody