ಸೋಮವಾರ, ಏಪ್ರಿಲ್ 28, 2025
HomeCrimeRajasthan Suicide Case‌ : ನಾಲ್ವರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Rajasthan Suicide Case‌ : ನಾಲ್ವರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

- Advertisement -

ರಾಜಸ್ಥಾನ : ಮಹಿಳೆಯೊಬ್ಬಳು ಮೂವರು ಹೆಣ್ಣು ಮಕ್ಕಳು ಮತ್ತು ಒಂದು ಗಂಡು ಮಗು ಸೇರಿದಂತೆ ನಾಲ್ವರು ಮಕ್ಕಳನ್ನು (Rajasthan Suicide Case) ಕೊಲೆಗೈದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 27 ವರ್ಷದ ಮಹಿಳೆ ತನ್ನ ನಾಲ್ಕು ಮಕ್ಕಳನ್ನು ಸ್ಟೀಲ್ ಡ್ರಮ್‌ನಲ್ಲಿ ಲಾಕ್ ಮಾಡಿದ್ದಾಳೆ, ಅಲ್ಲಿ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಮಂಡಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಮಲೇಶ್ ಗೆಹ್ಲೋಟ್ ತಿಳಿಸಿದ್ದಾರೆ.

ಇದನ್ನೂ ಓದಿ : Education Loan Fraud : ಶೈಕ್ಷಣಿಕ ಸಾಲದ ಹೆಸರಲ್ಲಿ ಬೆಂಗಳೂರಿನ ಕಂಪೆನಿಯಿಂದ ವಿದ್ಯಾರ್ಥಿ ಗಳಿಗೆ 18 ಕೋಟಿ ರೂ. ವಂಚನೆ

ಮೃತಳ ಪತಿ ಗಣಿ ಕಾರ್ಮಿಕನಾಗಿದ್ದು, ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಂಪತಿ ನಡುವೆ ಗಲಾಟೆ ನಡೆದಿದ್ದು, ಇದೇ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರ ಕುಟುಂಬ ಸದಸ್ಯರೊಂದಿಗೆ ಸಂಪರ್ಕಕ್ಕೆ ಬಂದಿದ್ದು, ಔಪಚಾರಿಕ ದೂರಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ಭಾನುವಾರ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Rajasthan Suicide Case: A woman killed her four children and committed suicide

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular