ರಾಮನಗರ : ಮಕ್ಕಳಿಗೆ ಬಾಡೂಟದ ಜೊತೆಗೆ ಮದ್ಯ ಕುಡಿಸಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಡಿಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವವನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳಿಗೆ ಮದ್ಯ ಕುಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು.
ಇದರ ಬೆನ್ನಲ್ಲೇ ರಾಮನಗರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
