Rape by father: 13 ವರ್ಷದ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ: ದೂರು ದಾಖಲು

ಕಲಬುರಗಿ: (Rape by father) 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾದ ನಂತರ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಕಾಮುಕ ತಂದೆಯ ವಿರುದ್ದ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ತಂದೆಯಿಂದಲೇ ಮಕ್ಕಳು ಅತ್ಯಾಚಾರಕ್ಕೊಳಗಾದ ಘಟನೆಗಳು ಬೆಳಕಿಗೆ ಬರುತ್ತಿವೆ. ಇದೀಗ ಕಲಬುರಗಿಯಲ್ಲೂ ಅಂತಹದೇ ಘಟನೆ ನಡೆದಿದ್ದು, ಮನೆಯಲ್ಲಿ ಹೆಂಡತಿ ಇಲ್ಲದ ಸಮಯ ನೋಡಿಕೊಂಡು ಕಾಮುಕ ತಂದೆಯೇ ತನ್ನ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ. ಕೆಲ ದಿನಗಳ ನಂತರ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ವಾಂತಿಯಾಗಲು ಪ್ರಾರಂಭವಾಗಿದೆ. ಇದನ್ನು ಗಮನಿಸಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಾಲಕಿಯನ್ನು ಚಿಕಿತ್ಸೆಗೆ ಒಳಪಡಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಷಯ ತಿಳಿದು ಬಂದಿದೆ.

ಆತಂಕಕ್ಕೆ ಒಳಗಾದ ಕುಟುಂಬಸ್ಥರು ಬಾಲಕಿಯನ್ನು ವಿಚಾರಿಸಿದಾಗ ತಂದೆಯೇ ಈ ಕೃತ್ಯ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇಳಿದ ಕುಟುಂಬ ಆಘಾತಕ್ಕೊಳಗಾಗಿದ್ದು, ನಂತರ ಕಾಮುಕ ತಂದೆಯ ವಿರುದ್ದ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕುಟುಂಬಸ್ಥರ ದೂರಿನನ್ವಯ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : Dhanbad Fire Accident : ಬಹುಮಹಡಿ ಕಟ್ಟಡದಲ್ಲಿ ಅಗ್ನಿದುರಂತ : ಮಕ್ಕಳು ಸೇರಿ 14 ಮಂದಿ ಸಾವು

ಮನೆಯವರಿಗೆ ವಿಷಯ ತಿಳಿಯುತ್ತಿದ್ದಂತೆ ಆರೋಪಿ ತಂದೆ ನಾಪತ್ತೆಯಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದಕ್ಕೆ ಬೈದ ತಾಯಿ: ಮನನೊಂದು ನೇಣಿಗೆ ಶರಣಾದ ಬಾಲಕ

3.5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ: ತಾಯಿಯ ಪ್ರಿಯಕರನಿಂದಲೇ ಕೃತ್ಯ ನಡೆದಿರುವ ಶಂಕೆ

ಬೆಂಗಳೂರು: ಮೂರುವರೆ ವರ್ಷದ ಬಾಲಕಿ ಮೇಲೆ ಪರಿಚಯಸ್ಥರಿಂದಲೇ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗಂಡನನ್ನು ಬಿಟ್ಟು ಆರೋಪಿ ಜೊತೆ ಬಾಲಕಿಯ ತಾಯಿ ಕಳೆದ ಒಂದು ವರ್ಷದಿಂದ ವಾಸವಿದ್ದಳು. ಎರಡು ದಿನದ ಹಿಂದೆ ಗಾಂಜಾ ನಶೆಯಲ್ಲಿದ್ದ ಆರೋಪಿ ಮಗುವಿನ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದಾನೆ. ಇದೀಗ ಅರೋಪಿಯ ವಿರುದ್ದ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : Lorry driver death: ಅನುಮಾನಸ್ಪದ ರೀತಿಯಲ್ಲಿ ಲಾರಿ ಚಾಲಕ ಸಾವು: ಇನ್ನೋರ್ವ ಚಾಲಕನೇ ಕೊಲೆ ಮಾಡಿರುವ ಶಂಕೆ

Rape by father: Rape of 13-year-old girl by father: File a complaint

Comments are closed.