Rape case-accused suicide: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿ ಮುಂಬೈ ಜೈಲಿನಲ್ಲಿ ಆತ್ಮಹತ್ಯೆ

ಮುಂಬೈ: (Rape case-accused suicide) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾದ 19 ವರ್ಷದ ಯುವಕ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕರಣ್‌ ಪ್ರಮೋದ್‌ ಸೆರಿಯನ್‌ ಎಂದು ಗುರುತಿಸಲಾಗಿದೆ.

ಆರೋಪಿ ಸೆರಿಯನ್‌ ಮಂಗಳವಾರ ಮುಂಜಾನೆ ಬ್ಯಾರಕ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ(Rape case-accused suicide) ಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಕೈದಿಗಳಿಂದ ಮಾಹಿತಿ ಪಡೆದ ಪೊಲೀಸರು ಅತನನ್ನು ಆಸ್ಪತ್ರೆಗೆ ಕರೆದೋಯ್ದಿದ್ದಾರೆ. ಅದರೆ ಮಾರ್ಗ ಮಧ್ಯದಲ್ಲೇ ಆತ ಸಾವನ್ನಪ್ಪಿದ್ದನು ಎಂದು ವೈದ್ಯರು ತಿಳಿಸಿದ್ದಾರೆ. ಸೆಪ್ಟೆಂಬರ್ 26 ರಿಂದ ಜೈಲಿನಲ್ಲಿದ್ದ ಮುಂಬ್ರಾ ನಿವಾಸಿ ಸೆರಿಯನ್, ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮೋಥೆ ಪೊಲೀಸರು ಸೆರಿಯನ್‌ನನ್ನು ಸೆಪ್ಟೆಂಬರ್ 22 ರಂದು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ, ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಅಡಿಯಲ್ಲಿ ಆರೋಪಿಯ ಮೇಲೆ ಕೇಸ್‌ ದಾಖಲಾಗಿತ್ತು.

ಸೆರಿಯನ್ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಥಾಣೆಯ ಮುಂಬ್ರಾದಲ್ಲಿ ಇಬ್ಬರು ವಾಸಿಸುತ್ತಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ ಬಳಿಕ ಬಾಲಕಿ ಆತನೊಂದಿಗೆ ಓಡಿ ಹೋಗಿದ್ದಾಳೆ. ಸೆರಿಯನ್ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಕೂಡ ಇಟ್ಟುಕೊಂಡಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : Pakistan Murder: ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ; ತಲೆ ಕಡಿದು, ಚರ್ಮ ಸುಲಿದು ಪೈಶಾಚಿಕ ಕೃತ್ಯ

ಬಾಲಕಿಯ ಪೋಷಕರ ದೂರಿನ ಮೇರೆಗೆ ಕಾಮೋಥೆ ಪೊಲೀಸರು ಸೆರಿಯನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೀಗ ಆರೋಪಿ ಮೃತ ಸೆರಿಯನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಖಾರ್ಘರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

A 19-year-old arrested for raping a minor girl committed suicide by hanging himself at the Taloja Central Jail in Navi Mumbai.

Comments are closed.