Rape case- lady died: ಅತ್ಯಾಚಾರವೆಸಗಿ ಮಹಿಳೆಗೆ ಬೆಂಕಿ ಹಚ್ಚಿದ ಕಾಮುಕ : ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ರಾಜಸ್ಥಾನ: (Rape case- lady died) ವ್ಯಕ್ತಿಯೋರ್ವ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದು, ನಂತರ ಆಕೆಯ ಮೇಲೆ ಆಸಿಡ್‌ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. ಸುಟ್ಟ ಗಾಯಗಳಾದ ಮಹಿಳೆಯನ್ನುಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ವೇಳೆ ಸಾವನ್ನಪ್ಪಿದ್ದಾಳೆ. ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಗುರುವಾರ ವ್ಯಕ್ತಿಯೋರ್ವನಿಂದ ಮಹಿಳೆ ಅತ್ಯಾಚಾರಕ್ಕೊಳಗಾಗಿದ್ದಳು.

ಗುರುವಾರದಂದು ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಆಕೆಯ ಪತಿ ಕೆಲಸಕ್ಕಾಗಿ ಹೊರಗೆ ಹೋಗಿದ್ದು, ಅವರ ಮಕ್ಕಳು ಶಾಲೆಯಲ್ಲಿದ್ದರು. ಈ ವೇಳೆ ಆರೋಪಿ ಶಕುರ್ ಖಾನ್ ಎಂಬಾತ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಹಿಳೆಯ ಚೀರಾಟ ಕೇಳಿ ನೆರೆಮನೆಯವರು ಸ್ಥಳಕ್ಕಾಗಮಿಸಿದ್ದು, ಆಕೆಯನ್ನು ರಕ್ಷಿಸಲು ಮುಂದಾದಾಗ ಆರೋಪಿ ನೆರೆಮನೆಯವರನ್ನು ತಳ್ಳಿ ಆ್ಯಸಿಡ್ ಅನ್ನು ಮಹಿಳೆಯ ಮೇಲೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಮಕ್ಕಳನ್ನು ಹೊಂದಿರುವ ಮಹಿಳೆಗೆ ದಾಳಿಯಲ್ಲಿ 40-50% ಸುಟ್ಟ ಗಾಯಗಳಾಗಿವೆ. ಆಕೆಯನ್ನು ಮೊದಲು ಬಲೋತ್ರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಜೋಧ್‌ಪುರದ ಉನ್ನತ ವೈದ್ಯಕೀಯ ಸಂಸ್ಥೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಮಹಿಳೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದಳು.

ಘಟನೆಯ ಬಳಿಕ ಮಹಿಳೆಯ ಪತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರಂಭದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಲಿಲ್ಲ. ಪ್ರಕರಣ ನಿರ್ಣಾಯಕವಾದ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ಆರೋಪಿಯ ವಿರುದ್ದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಹಾಗೂ ವಿವಿಧ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಶವಪರೀಕ್ಷೆ ನಡೆಸಿದ ಬಳಿಕ ಮಹಿಳೆಯ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪಿವಿಸಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

ಇದನ್ನೂ ಓದಿ : ಶಿಕ್ಷಕರ ನೇಮಕಾತಿ ಹಗರಣ: 2 ನಕಲಿ ವೆಬ್‌ಸೈಟ್‌ಗಳ ಬಗ್ಗೆ ಗೂಗಲ್‌ಗೆ ಪತ್ರ ಬರೆದ ಸಿಬಿಐ

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅದೇ ಗ್ರಾಮದ ಶಕುರ್ ಖಾನ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ತಡರಾತ್ರಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Rape case- lady died: Lover who set woman on fire after rape: Woman died without treatment

Comments are closed.