ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವಕನಿಗೆ ವಿದ್ಯಾರ್ಥಿನಿಯೋರ್ವಳು ಚಪ್ಪಲಿಯೇಟು ಕೊಟ್ಟಿರುವ ನಡೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ( Kundapura) ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರಕೂರಿನ ನಿವಾಸಿ ನಜೀರ್ ( 35 ವರ್ಷ) ಎಂಬಾತನೇ ಯುವತಿಯಿಂದ ಚಪ್ಪಲಿಯೇಟು ತಿಂದ ಯುವಕ. ಬೀಜಾಡಿ – ವಕ್ವಾಡಿ ರಸ್ತೆಯಲ್ಲಿರುವ ಹಾಸ್ಟೆಲ್‌ನಿಂದ ಯುವತಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆಯಲ್ಲಿ ಹಿಂದಿನಿಂದ ಬಂದ ನಜೀರ್ ಆಕೆಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆಯಲ್ಲಿ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಿಸಿದ ವೇಳೆಯಲ್ಲಿ ವಿದ್ಯಾರ್ಥಿನಿ ವಿಚಾರವನ್ನು ತಿಳಿಸಿದ್ದು, ನಜೀರ್‌ಗೆ ಚಪ್ಪಲಿಯೇಟು ಕೊಟ್ಟಿದ್ದಾಳೆ.
ನಜೀರ್ ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಕುಂದಾಪುರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಕಳೆದ ವರ್ಷವಷ್ಟೇ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್ ಅನ್ನು ಉದ್ಘಾಟಿಸಲಾಗಿತ್ತು. ಆದರೆ ಈ ಭಾಗದಲ್ಲಿ ಹಾಸ್ಟೆಲ್ ಇರುವುದು ವಿದ್ಯಾರ್ಥಿನಿಯರಿಗೆ ಸೇಪ್ ಅಲ್ಲಾ ಅನ್ನೋ ಮಾತುಗಳು ಕೇಳಿಬಂದಿದೆ. ಸದ್ಯ ವಿದ್ಯಾರ್ಥಿನಿ ಆರೋಪಿಗೆ ಚಪ್ಪಲಿಯೇಟು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : Gang rape Bangalore : ಬೆಂಗಳೂರಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಪ್ರಿಯಕರನಿಂದಲೇ ಗ್ಯಾಂಗ್ ರೇಪ್
ಇದನ್ನೂ ಓದಿ : Student commits suicide : 12 ನೇ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು, ವಾಮಾಚಾರದ ಶಂಕೆ
Rude behavior by youth in Kundapura Student slapped