School roof collapsed: ಶಾಲಾ ಮೇಲ್ಚಾವಣೆ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಶಾಖಪಟ್ಟಣಂ: (School roof collapsed) ತರಗತಿಯ ಛಾವಣಿಯ ಒಂದು ಭಾಗವು ಅವರ ಮೇಲೆ ಬಿದ್ದು ಮೂವರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿರುವ ಅಹಿತಕರ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಶಾಖಪಟ್ಟಣಂ ಜಿಲ್ಲೆಯ ಪದ್ಮನಾಭಂ ಮಂಡಲದ ಅರ್ಚಕುನಿಪಾಲೆಂ ಪ್ರಾಥಮಿಕ ಶಾಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಶಾಲೆಯನ್ನು ಇತ್ತೀಚೆಗೆ ನವೀಕರಿಸಲಾಗಿದ್ದು, ತರಗತಿ ನಡೆಯುವ ಸಮಯದಲ್ಲಿ ಶಾಲೆಯ ಛಾವಣಿಯ ಪ್ಲಾಸ್ಟರ್ ಕುಸಿದು ಬಿದ್ದಿದೆ. ಈ ಸಂದರ್ಭ ತರಗತಿಯಲ್ಲಿ ಕುಳಿತಿದ್ದ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಬಿದ್ದಿದ್ದು, ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ತರಗತಿಯಲ್ಲಿದ್ದ ಉಳಿದ ವಿದ್ಯಾರ್ಥಿಗಳು ಘಟನೆಯಿಂದ ಪಾರಾಗಿದ್ದಾರೆ.

ತಲೆಗೆ ಸಣ್ಣಪುಟ್ಟ ಗಾಯಗಳಾದ ಟಿ.ವೇದಶ್ರೀ ಎಂಬ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಸಮೀಪದ ವಿಜಯನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಪದ್ಮನಾಭಂ ಪೊಲೀಸರು ತಿಳಿಸಿದ್ದಾರೆ. ಉಳಿದ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಘಟನೆಯ ಕುರಿತು ವಿಶಾಖಪಟ್ಟಣಂನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Drug case- three arrested: ಕುಂದಾಪುರ: ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣ: ಮೂವರು ಪೊಲೀಸರ ವಶಕ್ಕೆ

ಕುಂದಾಪುರ: ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣ: ಮೂವರು ಪೊಲೀಸರ ವಶಕ್ಕೆ

ಕುಂದಾಪುರದ ವಡೇರಹೋಬಳಿ ಗ್ರಾಮದ ಟಿಟಿ ರಸ್ತೆಯ ಬಳಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯದಲ್ಲಿ ವ್ಯಕ್ತಿಯೋರ್ವರು ಕರೆ ಮಾಡಿ ವಡೇರಹೋಬಳಿ ಗ್ರಾಮದ ಟಿಟಿ ರಸ್ತೆಯ ಬಳಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದಾಗ ಆಶಿಶ್‌ ಎನ್ನುವಾತ ಅಮಲಿನಲ್ಲಿರುವುದು ಕಂಡುಬಂದಿದೆ. ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ತಪಾಸಣೆ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಇದನ್ನೂ ಓದಿ : Hasan crime news: ಹಣಕಾಸು ವಿಷಯಕ್ಕೆ ಯುವಕನ ಅಪರಹಣ: ನಾಲ್ಕು ದಿನದ ನಂತರ ಪತ್ತೆಯಾಯ್ತು ಶವ

ಇದನ್ನೂ ಓದಿ : College lecturer committed suicide: ಮಂಗಳೂರು : ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Three students were injured after the school roof collapsed

Comments are closed.