ಕಾರ್ಕಳದಲ್ಲಿ ಶಾಲಾ ಮಕ್ಕಳ ಪ್ರವಾಸ ಬಸ್‌ ಪಲ್ಟಿ : ಮೂವರು ಶಿಕ್ಷಕಿಯರು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರ್ಕಳ : ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿರುವ ಪ್ರವಾಸದ ಬಸ್‌ (School trip bus accident) ಮುಗುಚಿ ಬಿದ್ದು ಅಪಘಾತಕ್ಕೆ ಒಳಗಾದ ಘಟನೆ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರವಾಸ ಬಸ್ಸಿನಲ್ಲಿ ಇದ್ದ ಮಕ್ಕಳು ಸೇರಿದಂತೆ ಶಿಕ್ಷಕಿಯರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

ಧರ್ಮಸ್ಥಳ ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆಂದು ಕರಾವಳಿಗೆ ಬಂದಿದ್ದಾರೆ. ಈ ಘಟನೆಯಲ್ಲಿ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಆಗಿದ್ದು ಇತರ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳು ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಸಣ್ಣ ಪುಟ್ಟ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯರು ಸೇರಿ ಪ್ರಥಮ ಚಿಕಿತ್ಸೆ ನೀಡಿಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ ಪಲ್ಟಿ: ಓರ್ವ ಸಾವು, 43 ಮಂದಿಗೆ ಗಾಯ

ಕೇರಳ: (Students tour bus overturned) ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಕರೆದೊಯ್ಯುತಿದ್ದ ಬಸ್‌ ಕಮರಿಗೆ ಉರಳಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಹಾಗೂ ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಮುನಿಯಾರ ಬಳಿಯಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಿಲ್ಹಾಜ್‌ ಎಂದು ಗುರುತಿಸಲಾಗಿದೆ.

ಪ್ರಾದೇಶಿಕ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಕರೆದೊಯ್ದಿದ್ದ ಬಸ್‌ ಮಲಪ್ಪುರಂನಿಂದ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ(Students tour bus overturned). ಮಧ್ಯರಾತ್ರಿ ಸರಿಸುಮಾರು 1:15ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ : ಡೆತ್‌ನೋಟ್‌ನಲ್ಲಿ ಬಿಜೆಪಿ ಶಾಸಕರ ಹೆಸರು

ಇದನ್ನೂ ಓದಿ : Terrorist attack in Rajouri : ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಉಗ್ರರ ದಾಳಿ : ನಾಲ್ವರು ಸಾವು, 9 ಮಂದಿಗೆ ಗಾಯ

ಮೃತ ವ್ಯಕ್ತಿ ಮಿಲ್ಹಾಜ್‌ ಅಪಘಾತದ ನಂತರದಲ್ಲಿ ಕಮರಿಗೆ ಉರುಳಿದ್ದ ಬಸ್‌ ಅಡಿಯಲ್ಲಿ ದೀರ್ಘಕಾಲದ ವರೆಗೂ ಸಿಲುಕಿಕೊಂಡಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ ಗಾಯಗೊಂಡ ನಲವತ್ತಮೂರು ಮಂದಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅಪಘಾತ ಸಂಭವಿಸಿದ ಬಸ್‌ ನಲ್ಲಿ ಒಟ್ಟು 41 ವಿದ್ಯಾರ್ಥಿಗಳು ಮತ್ತು 3 ಬಸ್ ಸಿಬ್ಬಂದಿಗಳು ಇದ್ದರು ಎಂದು ಎಂದು ವರದಿಗಳು ತಿಳಿಸಿವೆ.

School trip bus accident: School trip bus overturned in Karkala: Three teachers, two students seriously injured

Comments are closed.