School vehicle overturned : ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಾಹನ ಪಲ್ಟಿ : ಓರ್ವ ಮಹಿಳೆ ಸಾವು

ಕಾರಾವರ : (School vehicle overturned) ಚಾಲಕನ ಅಜಾಗರೂಕತೆಯಿಂದ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಾಹನ ಪಲ್ಟಿಯಾಗಿ, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮತ್ತು ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಸ್ತೂರಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಪ್ರವಾಸಕ್ಕೆಂದು ತೆರಳಿದ್ದ ಬಸ್‌,ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ(School vehicle overturned)ಯಾಗಿದ್ದು,ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಏಳು ಮಂದಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ.ಗಾಯಾಳುಗಳನ್ನು ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ರವಾನಿಸಲಾಗಿದೆ .

ರಾಣಿ ಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರದ ಶಾಲೆಯ ವಿದ್ಯಾರ್ಥಿಗಳು ರಾಣಿ ಬೆನ್ನೂರಿನ ಸಿದ್ದಾರೂಢ ನಗರದಿಂದ ಶಿರಸಿಯತ್ತ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಬಸ್‌ ಪಲ್ಟಿಯಾಗಿದ್ದು, ಇದಕ್ಕೆ ಬಸ್‌ ಚಾಲಕನ ಅತೀ ವೇಗವೇ ಕಾರಣ ಎನ್ನಲಾಗಿದೆ. ಈ ಕುರಿತು ಬನವಾಸಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : Crime Case : ಬಿರಿಯಾನಿ ನೀಡಿದ್ದೇ ತಡವಾಯ್ತು : ಮೂವರಿಂದ ರೆಸ್ಟೋರೆಂಟ್ ಸಿಬ್ಬಂದಿಗೆ ಥಳಿತ

ಕೆಟ್ಟು ನಿಂತಿದ್ದ ಟ್ಯಾಂಕರ್‌ ಗೆ ಶಾಲಾ ವಾಹನ ಡಿಕ್ಕಿ ; ಅಪಾಯದಿಂದ ಪಾರು

ಯಲ್ಲಾಪುರ : ಕೆಟ್ಟು ನಿಂತಿದ್ದ ಟ್ಯಾಂಕರ್‌ ಒಂದಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು ಹದಿನೈದು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯ ಅರೆಬೈಲು ಘಟ್ಟದಲ್ಲಿ ನಡೆದಿದೆ.

ಇದನ್ನೂ ಓದಿ : Crime News : ಬಿರಿಯಾನಿಯಲ್ಲಿ ಪಾಲು ಕೇಳಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ !

ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದ ಹುಬ್ಬಳ್ಳಿಯ ಸೈಂಟ್‌ ಅಂಥೋನಿ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳಿರುವ ಬಸ್‌ ಅರೆಬೈಲು ಬಳಿ ಇನ್ನೊಂದು ಗಾಡಿಯನ್ನು ಓವರ್‌ ಟೇಕ್‌ ಮಾಡಲು ಹೋಗಿ ಕೆಟ್ಟು ನಿಂತಿದ್ದ ಟ್ಯಾಂಕರ್‌ ಒಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಕುರಿತು ಯಲ್ಲಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

(School vehicle overturned) ಚಾಲಕನ ಅಜಾಗರೂಕತೆಯಿಂದ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಾಹನ ಪಲ್ಟಿಯಾಗಿ, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮತ್ತು ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಸ್ತೂರಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ.

Comments are closed.