Set fire and murdered: ಮಾದಕ ವಸ್ತು ಸೇವನೆ ಪ್ರಕರಣ: ಮಹಿಳೆಗೆ ಬೆಂಕಿ ಹಚ್ಚಿ ಕೊಲೆ: ಆರೋಪಿ ಅರೆಸ್ಟ್‌

ನವದೆಹಲಿ: (Set fire and murdered) ಮಾದಕ ವಸ್ತು ಸೇವನೆಯ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಲಿವ್‌ ಇನ್‌ ಸಂಗಾತಿ ಬೆಂಕಿ ಹಚ್ಚಿ ಕೊಂದ‍ ಘಟನೆ ದೆಹಲಿ ಅಮನ್‌ ವಿಹಾರ್‌ನಲ್ಲಿ ನಲ್ಲಿ ನಡೆದಿದೆ. ಮೃತರನ್ನು ವಾಯುವ್ಯ ದೆಹಲಿಯ ಬಲ್ಬೀರ್ ವಿಹಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಪಾದರಕ್ಷೆ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆ ತನ್ನ ಪತಿಯನ್ನು ತೊರೆದು ಕಳೆದ ಆರು ವರ್ಷಗಳಿಂದ ಆರೋಪಿ ಮೋಹಿತ್‌ನೊಂದಿಗೆ ವಾಸಿಸುತ್ತಿದ್ದಳು. ಆಕೆಗೆ ಇಬ್ಬರು ಮಕ್ಕಳಿದ್ದರು. ಫೆಬ್ರವರಿ 10 ರಂದು ರಾತ್ರಿ ಮೋಹಿತ್ ತನ್ನ ಸ್ನೇಹಿತನ ಜೊತೆ ಡ್ರಗ್ಸ್ ಸೇವಿಸುತ್ತಿರುವುದನ್ನು ಕಂಡು ಮಹಿಳೆ ಆತನೊಂದಿಗೆ ಜಗಳವಾಡಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಆರೋಪಿ ಆಕೆಯ ಮೇಲೆ ‘ಟಾರ್ಪಿನ್ ಆಯಿಲ್’ ಸುರಿದು ಬೆಂಕಿ ಹಚ್ಚಿದ್ದಾನೆ.

ಬೆಂಕಿಯಲ್ಲಿ ಬೆಂದು ಹೋಗಿದ್ದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಇದೀಗ ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇನ್ನೂ ಆಕೆಯ ಕುಟುಂಬ ಸದಸ್ಯರ ಹೇಳಿಕೆಯ ಆಧಾರದ ಮೇಲೆ ಅಮನ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Truck caught fire: ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ; ಸಂಚಾರ ಅಸ್ತವ್ಯಸ್ತ

ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ; ಸಂಚಾರ ಅಸ್ತವ್ಯಸ್ತ

ಮುಂಬೈ: ಡ್ರಮ್‌ಗಳಲ್ಲಿ ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಮುಂಬೈ ಹೆದ್ದಾರಿಯ ಬೀರಮಗುಡ ರಸ್ತೆ ಪ್ರದೇಶದಲ್ಲಿ ನಡೆದಿದೆ. ಇಂಜಿನ್ ಅಧಿಕ ಬಿಸಿಯಾದ ಕಾರಣ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ. ಸಮೀಪದಲ್ಲಿ ನಿಲ್ಲಿಸಲಾಗಿದ್ದ ಕಾರಿಗೂ ಬೆಂಕಿ ವ್ಯಾಪಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿ ಶ್ರೀನಿವಾಸ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ

ಇದನ್ನೂ ಓದಿ : Mexico bus accident: ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 17 ಮಂದಿ ಸಾವು

ಇದನ್ನೂ ಓದಿ : Kolara students ill: ಚಿತ್ರಾನ್ನ ಸೇವಿಸಿ ಅಸ್ವಸ್ಥರಾಗಿದ್ದ ಮಕ್ಕಳು ಮತ್ತೊಮ್ಮೆ ಅಸ್ವಸ್ಥ

ಇದೀಗ ಆರೋಪಿ ಮೋಹಿತ್‌ನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Set fire and murdered: Drug consumption case: Woman set on fire and murdered: Accused arrested

Comments are closed.