ಹೈದರಾಬಾದ್: (Sexual harrasment on girls) ಒಡಿಶಾದ ಏಳು ಅಪ್ರಾಪ್ತ ಬಾಲಕಿಯರನ್ನು ಸಂಗಾರೆಡ್ಡಿ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ “ಕಾನೂನುಬಾಹಿರವಾಗಿ” ನೇಮಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಐದು ತಿಂಗಳ ಹಿಂದೆ ಜಿಲ್ಲೆಯ ನಾರಾಯಣಖೇಡ್ ಮಂಡಲದ ಇಟ್ಟಿಗೆ ಭಟ್ಟಿಯಲ್ಲಿ ಅಪ್ರಾಪ್ತ ಬಾಲಕಿಯರು ಸೇರಿದಂತೆ 72 ಜನರ ಗುಂಪು ಕೆಲಸ ಮಾಡುತ್ತಿತ್ತು. ಕಾರ್ಮಿಕರು ಇತ್ತೀಚೆಗೆ ಒಡಿಶಾ ಮುಖ್ಯ ಕಾರ್ಯದರ್ಶಿಯನ್ನು ಸಂಪರ್ಕಿಸಿ ತಮ್ಮ ಮಾಲೀಕರಿಂದ ಶೋಷಣೆ(Sexual harrasment on girls)ಗೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದರು.
ಕಾರ್ಮಿಕರ ಆರೋಪದ ಮೇಲೆ ತೆಲಂಗಾಣ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಒಡಿಶಾ ಮುಖ್ಯ ಕಾರ್ಯದರ್ಶಿಯಿಂದ ಮಾಹಿತಿ ಪಡೆದು, ನಂತರ ರಾಜ್ಯ ಕಾರ್ಮಿಕ ಇಲಾಖೆ, ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಒಟ್ಟಿಗೆ ಸೇರಿ ಇಟ್ಟಿಗೆ ಭಟ್ಟಿ ಮೇಲೆ ದಾಳಿ ನಡೆಸಿದರು. ಅಲ್ಲಿ ಅಪ್ರಾಪ್ತ ಬಾಲಕಿಯರ ಬಳಿ ಮಾಲೀಕರಿಂದ ಲೈಂಗಿಕ ಕಿರುಕುಳದ ಬಗ್ಗೆ ಮಾಹಿತಿ ಪಡೆಯಲಾಯಿತು.
ರಾಜ್ಯ ಕಾರ್ಮಿಕ ಇಲಾಖೆ, ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಬುಧವಾರ ಇಟ್ಟಿಗೆ ಭಟ್ಟಿಯ ನಾಲ್ವರು ಮಾಲೀಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
ಇದನ್ನೂ ಓದಿ : Bengaluru Fire accident: ಕಾರ್ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರ್‌ಗಳು ಭಸ್ಮ
ಇದನ್ನೂ ಓದಿ : Drinking contaminated water-dead: ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಇದನ್ನೂ ಓದಿ : Drug sales case: ಮಣಿಪಾಲ: ಮಾದಕ ವಸ್ತು ಮಾರಾಟ: ಇಬ್ಬರು ವಿದ್ಯಾರ್ಥಿಗಳ ಅಮಾನತು
ಕಾರ್ಮಿಕರನ್ನು ಅಕ್ರಮವಾಗಿ ಇಟ್ಟಿಗೆ ಭಟ್ಟಿಯಲ್ಲಿ ನೇಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಪ್ರಾಪ್ತ ಬಾಲಕಿಯರನ್ನು ಒಡಿಶಾಗೆ ವಾಪಸ್ ಕಳುಹಿಸುವ ವ್ಯವಸ್ಥೆಯನ್ನೂ ಮಾಡಿದ್ದು, ಪ್ರಕರಣದ ಕುರಿತು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
Sexual harassment on girls: Sexual harassment on minor girls: Case against 4 persons