ಮುಂಬೈ : ಅಶ್ಲೀಲ ಚಿತ್ರಗಳ ನಿರ್ಮಾಣ ಮಾಡಿದ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 2021 ರಲ್ಲಿ ಕ್ರೈಂ ಬ್ರ್ಯಾಂಚ್ ಮುಂಬೈನಲ್ಲಿ ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಹಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರದರ್ಶಿಸುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಾಗಿಯಾಗಿದ್ದಾರೆ. ಈ ಕುರಿತು ಸಾಕಷ್ಟು ಸಾಕ್ಷಾಧಾರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ತಿಳಿಸಿದ್ದಾರೆ.

ವಂಚನೆ, ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕೃತ್ಯದಲ್ಲಿ ಭಾಗಿ, ಅಶ್ಲೀಲ ಪುಸ್ತಕ ಅಥವಾ ಸಾಹಿತ್ಯ ಪ್ರಸಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ರಾಜ್ ಕುಂದ್ರಾ ವಿರುದ್ದ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬೈನ ಕ್ರೈಂ ಬ್ರಾಂಚ್ ವಶದಲ್ಲಿರುವ ರಾಜ್ ಕುಂದ್ರಾ ಅವರನ್ನು, ಆಸ್ತಿ ಸೆಲ್ ಕಚೇರಿಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ : ವಿಶಾಲ ಗಾಣಿಗ ಕೊಲೆ ಪ್ರಕರಣ : ಇಬ್ಬರು ಹಂತಕರು ಅರೆಸ್ಟ್ ? ಪತಿಯೇ ಕೊಟ್ರಾ ಸುಫಾರಿ ..!

ರಾಜ್ ಕುಂದ್ರಾ, ಅಶ್ಲೀಲ ಚಿತ್ರಗಳಿಗಾಗಿ ನಗ್ನ ದೃಶ್ಯಗಳನ್ನು ಚಿತ್ರೀಕರಿಸಲು ನಟರನ್ನು ಒತ್ತಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಸುಮಾರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ತಂಡ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಈಗಾಗಲೇ ಆಪ್ ಗಳ ಮೂಲಕ ಪ್ರದರ್ಶನವನ್ನು ಮಾಡಿದೆ ಅನ್ನೋ ಆರೋಪವಿದೆ. ಈ ಕುರಿತು ಕ್ರೈಂ ಬ್ರ್ಯಾಂಚ್ ಪೊಲೀಸರು ಸಾಕಷ್ಟು ಸಾಕ್ಷಾಧಾರಗಳನ್ನು ಕಲೆಹಾಕಿದ್ದಾರೆ.
ಇದನ್ನೂ ಓದಿ : ಕೊರೊನಾ ಬೆನ್ನಲ್ಲೇ ಚೀನಾದಲ್ಲಿ ಮಂಕಿ ಬಿ ವೈರಸ್‌ಗೆ ಮೊದಲ ಬಲಿ ..!!

ರಾಮ್ ಕುಂದ್ರಾ ಮತ್ತು ಅವರ ಸಹಚರರ ವಿರುದ್ಧ ಬಾಲಿವುಡ್ ನಟಿ ಪೂನಂ ಪಾಂಡೆ ಬಾಂಬೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾಡೆಲ್ ಮತ್ತು ನಟಿಯಾಗಿರುವ ಪೂನಂ ಪಾಂಡೆ ಅವರು ರಾಜ್ ಕುಂದ್ರಾ ಮತ್ತು ಅವರ ಸಹಚರರು ತಮ್ಮ ವಿಷಯವನ್ನು ಅಕ್ರಮವಾಗಿ ಬಳಸುತ್ತಿದ್ದಾರೆಂದು ಎಂದು ಆರೋಪಿಸಿದ್ದಾರೆ. ಅಲ್ಲದೇ ಅವರ ನಡುವಿನ ಒಪ್ಪಂದವನ್ನು ಕೊನೆಗೊಳಿಸುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.