ಶಿವಮೊಗ್ಗ : Shivamogga police : ಶಿವಮೊಗ್ಗದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಕೋಮು ಸಂಘರ್ಷ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಉಗ್ರ ಚಟುವಟಿಕೆ ಕೂಡ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಈ ಮಾತಿಗೆ ಪುಷ್ಠಿ ಎಂಬಂತೆ ಶಿವಮೊಗ್ಗ ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರನ್ನು ತೀರ್ಥಹಳ್ಳಿ ಶಾರಿಕ್, ಮಾಜ್ ಹಾಗೂ ಯಾಸೀನ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸಿದ್ದೇಶ್ವರ ನಗರದ ಯಾಸೀನ್, ತೀರ್ಥಹಳ್ಳಿಯ ಶಾರಿಕ್ ಹಾಗೂ ಮಂಗಳೂರಿನ ಮಾಜ್ 2020ರಲ್ಲಿ ಗೋಡೆ ಬರಹ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಗೆ ಐಸಿಸ್ ಉಗ್ರರ ಜೊತೆ ಸಂಪರ್ಕವಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಆಗಸ್ಟ್ 15ರಂದು ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ವಿಚಾರವಾಗಿ ದೊಡ್ಡ ಸಂಘರ್ಷ ಸಂಭವಿಸಿತ್ತು. ಈ ಸಂದರ್ಭದಲ್ಲಿ ಬಟ್ಟೆ ಅಂಗಡಿ ವ್ಯಾಪಾರಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿತ್ತು. ಈ ತನಿಖೆಯ ಭಾಗವಾಗಿ ಭದ್ರಾವತಿ ಡಿವೈಎಸ್ಪಿ ಜಿತೇಂದ್ರ ಜಬೀವುಲ್ಲಾ ಮೊಬೈಲ್ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಈತನಿಗೆ ಉಗ್ರ ಸಂಘಟನೆಗಳ ಜೊತೆ ಸಂಪರ್ಕವಿದೆ ಎಂಬ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಲಭ್ಯವಾಗಿತ್ತು.
ಈ ದುಷ್ಕರ್ಮಿಗಳು ಐಸಿಸ್ ಸಹಾಯವನ್ನು ಪಡೆದು ರಾಜ್ಯದಲ್ಲಿ ಬಹು ದೊಡ್ಡ ಭಯೋತ್ಪಾದಕ ಕೃತ್ಯವನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ಯಾಸೀನ್ ಹಾಗೂ ಮಾಜ್ನನ್ನು ಪೊಲೀಸರು ಬಂಧಿಸಿದ್ದು ಮತ್ತೊಬ್ಬ ಆರೋಪಿ ಶಾರಿಕ್ಗಾಗಿ ಶೋಧ ಕಾರ್ಯ ಮುಂದುವರಿಸಿದ್ದೇವೆ ಎಂದು ಶಿವಮೊಗ್ಗ ಎಸ್ಪಿ ಬಿ.ಎಂ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಇದನ್ನೂ ಓದಿ : ಆಸೀಸ್ ವಿರುದ್ಧದ ಟಿ20 ಸರಣಿ: ಭಾರತ ತಂಡಕ್ಕೆ ಸಿಕ್ಕ ಹೊಸ ಬೌಲರ್; ಹೆಸರು ಕೇಳಿದ್ರೆ ಗಾಬರಿಯಾಗ್ತೀರಿ
Shivamogga police arrest suspected terrorists in shivamogga