ನವದೆಹಲಿ: Shraddha murder case: ದೆಹಲಿಯಲ್ಲಿ ಭೀಕರವಾಗಿ ಕೊಲೆಯಾದ ಶೃದ್ಧಾ ವಾಕರ್ ಪ್ರಕರಣದ ಆರೋಪಿ ಅಫ್ತಾಬ್ ನನ್ನು ಪೊಲೀಸರು ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಕೈಯಲ್ಲಿ ಖಡ್ಗಗಳನ್ನು ಹಿಡಿದು ಪೊಲೀಸರ ವಾಹನದ ಮೇಲೆ ದಾಳಿ ನಡೆಸಿದ್ದು, ಆರೋಪಿ ಅಫ್ತಾಬ್ ಸುರಕ್ಷಿತನಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Karnataka 2nd PUC Exam Timetable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಪೊಲೀಸರ ವಶದಲ್ಲಿರುವ ಅಫ್ತಾಬ್ ನನ್ನು ಇಂದು ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪೊಲೀಗ್ರಾಫ್ ಪರೀಕ್ಷೆ ನಡೆಸಿದ ಬಳಿಕ ಜೈಲಿಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಹಲವು ಮಂದಿ ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು, ಆರೋಪಿಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೆಲ ದಾಳಿಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಫ್ತಾಬ್ ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನ ದೆಹಲಿ ಎಫ್ ಎಸ್ ಎಲ್ ಕಚೇರಿ ಬಳಿ ತಲುಪುತ್ತಿದ್ದಂತೆ ಹಿಂದೂ ಸೇನೆ ಎಂದು ಹೇಳಿಕೊಂಡು ಬಂದಿದ್ದ ಇಬ್ಬರು ವ್ಯಕ್ತಿಗಳು ಕತ್ತಿ ಝಳಪಿಸಿ ದಾಳಿ ನಡೆಸಿದ್ದಾರೆ. ಈ ವೇಳೆ ರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಸುದ್ದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಶೃದ್ಧಾಳ ಮೃತದೇಹವನ್ನು ಕತ್ತರಿಸಲು ಬಳಸಿಕೊಂಡ ಆಯುಧ ಹಾಗೂ ಅಫ್ತಾಬ್ ಮತ್ತೊಬ್ಬ ಮಹಿಳೆಗೆ ನೀಡಿದ್ದ ಎನ್ನಲಾದ ಶೃದ್ಧಾಳ ಉಂಗುರವನ್ನು ಆತನಿಂದ ವಶಪಡಿಸಿಕೊಂಡಿದ್ದಾರೆ.
ಶೃದ್ಧಾಳ ಭೀಕರ ಕೊಲೆ ಪ್ರಕರಣದಲ್ಲಿ ನ.12ರಂದು ಅಫ್ತಾಬ್ ನನ್ನು ಬಂಧಿಸಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಬಳಿಕ ನ.17ರಂದು ಕೂಡಾ ಕೋರ್ಟ್ 5 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿತ್ತು. ನ.22ರಂದು 4 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ನ.26ರಂದು ಮತ್ತೆ ವಿಚಾರಣೆ ನಡೆಸಿದ್ದ ಕೋರ್ಟ್ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.
: Shraddha murder case: Men With Swords Attack Police Van Carrying Aaftab Poonawala