Sisters Found Hanging :ಅಕ್ಕ-ತಂಗಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರ-ಕೊಲೆ ಆರೋಪ

ಲಖಿಮಾಪುರ ಖೇರಿ : Sisters Found Hanging ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆ ಮೂಲಕ 2014ರಲ್ಲಿ ಇಡೀ ದೇಶಾದ್ಯಂತ ಸಂಚಲನ ಮೂಡಿಸಿದ ಉತ್ತರ ಪ್ರದೇಶದ ಬದೌನ್ ರೇಪ್ ಅಂಡ್ ಮರ್ಡರ್ ನಂಥ ಕರಾಳ ಘಟನೆಯನ್ನ ನೆನಪಿಸುವಂತೆ ಮಾಡಿದೆ.

ಬುಧವಾರ ಸಂಜೆ ಸಹೋದರಿಯಬ್ಬರಿ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಇಬ್ಬರೂ ದಲಿತ ಸಮುದಾಯದಕ್ಕೆ ಸೇರಿದವರಾಗಿದ್ದಾರೆ.ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.

ಬೈಕ್ ನಲ್ಲಿ ಬಂದ ವ್ಯಕ್ತಿಗಳು ತಮ್ಮ ಮಕ್ಕಳನ್ನ ಅಪಹರಿಸಿಕೊಂಡು ಹೋಗಿದ್ದಾರೆ ಅಂತಾ ಮೃತ ಬಾಲಕಿಯರ ತಾಯಿ ಮಾಧ್ಯಮದವ್ರಿಗೆ ತಿಳಿಸಿದ್ದು, ತಮ್ಮ ಮಕ್ಕಳ ಮೇಲೆ ಅತ್ಯಾಚ್ಯಾರ ಎಸಗಿ ಕೊಲೆ ಮಾಡಲಾಗಿದೆ ಅಂತಾ ಕುಟುಂಬದವರು ಆರೋಪಿಸಿದ್ದಾರೆ. ಸದ್ಯ ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಸಿಲಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇನ್ನು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಯುವತಿಯರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ, ಎಂದು ಲಖನೌನ ವಲಯದ ಐಜಿಪಿ ಲಕ್ಷ್ಮೀ ಸಿಂಗ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಸದ್ಯ ಮರಣೋತ್ತರ ಪರೀಕ್ಷೆ ನಡೆಸಲಾಗ್ತಿದ್ದು, ಕುಟುಂಬದವರು ನೀಡಿದ ದೂರಿನ ಮೇಲೆಯೇ ಎಫ್ಐಆರ್ ದಾಖಲಿಸೋದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ರೈತರ ಮೇಲೆ ಕಾರು ಹರಿಸಿದ ಪ್ರಕರಣ ಸದ್ದು ಮಾಡಿತ್ತು. ಕೇಂದ್ರ ಸಚಿವ ಅಜಯಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ, ಲಖಿಂಪುರ ಖೇರಿಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಪ್ರತಿಭಟನೆ ನಡೆಸ್ತಿದ್ದ ರೈತರ ಮೇಲೆ ಕಾರು ಹರಿಸಿದ್ರು. ಅದೇ ಪ್ರದೇಶದ ಸಮೀಪವೇ ದಲಿತ ಸಹೋದರಿಯರ ದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನು ಸಮಾಜವಾದಿ ಪಕ್ಷದ ನಾಯಕ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಘಟನೆಯನ್ನ ಖಂಡಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರೋ ಸಮಾಜವಾದಿ ಪಕ್ಷದ ರಾಜ್ಯ ಘಟಕ, ಯೋಗಿ ಸರ್ಕಾರದಲ್ಲಿ, ಗೂಂಡಾಗಳು ಪ್ರತಿದಿನ ತಾಯಿ ಮತ್ತು ಸಹೋದರಿಯರಿಗೆ ಕಿರುಕುಳ ನೀಡುತ್ತಿದ್ದಾರೆ, ಇದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ. ಸರ್ಕಾರವು ಈ ಬಗ್ಗೆ ತನಿಖೆ ನಡೆಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಸಮಾಜವಾದಿ ಪಕ್ಷ ಟ್ವೀಟ್ ಮಾಡಿದೆ.

ಇನ್ನೊಂದೆಡೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮಾಜಿ ಸಿಎಂ ಅಖಿಲೇಶ್ ಯಾದವ್ ಸಹ ಪ್ರತಿಭಟನೆಯ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ ಮತ್ತು ಬಾಲಕಿಯರನ್ನ ಅಪಹರಿಸಿ ನಂತರ ಕೊಲೆ ಮಾಡಲಾಗಿದೆ. ಅಲ್ದೆ ಪೋಷಕರ ಒಪ್ಪಿಗೆ ಇಲ್ಲದೇ ಬಾಲಕಿಯರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ನಿಘಾಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ದಲಿತ ಸಹೋದರಿಯರ ಅಪಹರಣ ಮತ್ತು ಹತ್ಯೆಯ ನಂತರ, ಅವರ ಮರಣೋತ್ತರ ಪರೀಕ್ಷೆಯನ್ನು ಒಪ್ಪಿಗೆಯಿಲ್ಲದೆ ಮಾಡಲಾಗಿದೆ ಎಂದು ಅವರ ತಂದೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಲಖೀಂಪುರದಲ್ಲಿ ರೈತರ ನಂತರ, ದಲಿತರ ಹತ್ಯೆ ಇದೀಗ ಘೋರ ಪುನರಾವರ್ತನೆಯಾಗಿದೆ. ‘ಹತ್ರಾಸ್ ಕಿ ಬೇಟಿ’ ಹತ್ಯಾಕಾಂಡ,” ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಮಹಿಳೆ ಮೇಲೆ ನಾಲ್ವರು ಮೇಲ್ಜಾತಿ ಪುರುಷರು ಅತ್ಯಾಚಾರವೆಸಗಿದ್ದರು. ಅವರು ಸೆಪ್ಟೆಂಬರ್ 29 ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾದರು. ಇನ್ನು ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ಸಹ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕವೇ ವಾಗ್ದಾಳಿ ನಡೆಸಿದ್ದಾರೆ.

‘ಲಖಿಂಪುರದಲ್ಲಿ ಇಬ್ಬರು ಸಹೋದರಿಯರ ಹತ್ಯೆ ಘಟನೆ ಹೃದಯ ವಿದ್ರಾವಕವಾಗಿದೆ, ಆ ಹೆಣ್ಣುಮಕ್ಕಳನ್ನು ಹಗಲು ಹೊತ್ತಿನಲ್ಲಿ ಅಪಹರಿಸಲಾಗಿದೆ ಎಂದು ಸಂಬಂಧಿಕರು ಹೇಳುತ್ತಾರೆ. ಪ್ರತಿದಿನ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವುದರಿಂದ ಕಾನೂನು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಏಕೆ? ಯುಪಿಯಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚುತ್ತಿವೆ? ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ

ಲಖೀಂಪುರ ಖೇರಿಯ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ 2014 ಘಟನೆಯನ್ನ ನೆನಪಿಸುವಂತೆ ಮಾಡಿದೆ. ಬದೌನನಲ್ಲಿಯೂ ಮರಣಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಸಹೋದರಿಯರ ಶವ ಪತ್ತೆಯಾಗಿತ್ತು. ತನಿಖೆಯಲ್ಲಿ ಇಬ್ಬರೂ ಮೇಲೂ ಅತ್ಯಾಚಾರವೆಸಗಿ  ನೇಣು ಹಾಕಿ ಕೊಲೆಮಾಡಿದ್ದಾರೆಂದು ಗೊತ್ತಾಗಿತ್ತು. ಈ ಘಟನೆ ದೇಶದಲ್ಲಿ ಮಹಿಳೆಯರ ಸುರಕ್ಷತೆ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು.

ಇದನ್ನೂ ಓದಿ : Mandya Ravi :ಅಕಾಲಿಕ ನಿಧನರಾದ ಮಂಡ್ಯ ರವಿಗೆ ಇತ್ತು ಅದೊಂದು ನನಸಾಗದ ಕನಸು

ಇದನ್ನೂ ಓದಿ : love jihad : ಕಾಫಿನಾಡಿನಲ್ಲಿ ಲವ್​ಜಿಹಾದ್​ ಆರೋಪ : ಠಾಣೆ ಮೆಟ್ಟಿಲೇರಿದ ಯುವತಿ

Sisters Found Hanging-Dalit Sisters Found Hanging From Tree In UP Family Alleges Rape Murder

Comments are closed.