gang-raped : ಸಾಫ್ಟ್​ವೇರ್​ ಇಂಜಿನಿಯರ್​ಗೆ ಥಳಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಜಾರ್ಖಂಡ್​ : gang raped Software engineer : 26 ವರ್ಷದ ಬುಡಕಟ್ಟು ಸಮಾಜಕ್ಕೆ ಸೇರಿದ ಸಾಫ್ಟ್​ವೇರ್​ ಇಂಜಿನಿಯರ್​ಗೆ ಥಳಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ಜಾರ್ಖಂಡ್​​ನ ಚೈಬಾಸಾದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು 10 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ . ಅತ್ಯಾಚಾರಕ್ಕೆ ಒಳಗಾದ ಟೆಕ್ಕಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆಕೆ ನೀಡಿರುವ ಹೇಳಿಕೆಯ ಪ್ರಕಾರ ಅಕ್ಟೋಬರ್​ 20ರಂದು ಆಕೆ ತನ್ನ ಸ್ನೇಹಿತನೊಂದಿಗೆ ಹೊರ ಬಂದಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಸಂತ್ರಸ್ತೆಯು ನೀಡಿರುವ ಹೇಳಿಕೆಯ ಪ್ರಕಾರ, ಮಹಿಳೆಯು ರಸ್ತೆಯಲ್ಲಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಳು. ಈ ಸಂದರ್ಭದಲ್ಲಿ ಎಂಟರಿಂದ ಹತ್ತು ಮಂದಿ ಗುಂಪಾಗಿ ಬಂದು ಇವರಿಬ್ಬರಿಗೆ ಥಳಿಸಿದ್ದಾರೆ. ಬಳಿಕ ಕಾಮುಕರ ಗುಂಪು ಮಹಿಳೆಯನ್ನು ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಎಸಗಿದ್ದಾರೆ. ಪೊಲೀಸರು ಈ ಸಂಬಂಧ ಎಫ್​ಐಆರ್​ ದಾಖಲಿಸಿದ್ದು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ಕಳುಹಿಸಿಕೊಟ್ಟಿದ್ದಾರೆ. ಇತ್ತ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಸದರ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗ್ತಿದೆ.

ಚೈಬಾಸಾ ಮಫಾಸಿಲ್​ ಪೊಲೀಸ್​ ಠಾಣೆ ವ್ಯಾಪ್ತಿಯ ಟೆಕ್ರಾಹಟು ಪ್ರದೇಶದ ಏರೋಡ್ರೋಮ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯು ಜಿಕ್ಪಾನಿ ಪೊಲೀಸ್​ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದರು ಎನ್ನಲಾಗಿದೆ. ಸಂಜೆ ಆರು ಗಂಟೆ ಸುಮಾರಿಗೆ ಈಕೆ ತನ್ನ ಸ್ನೇಹಿತನೊಂದಿಗೆ ಟೆಕ್ರಾಟಹು ಏರ್​ಸ್ಟ್ರಿಪ್​ಗೆ ಬೈಕ್​ನಲ್ಲಿ ತೆರಳಿದ್ದ ಸಂದರ್ಭದಲ್ಲಿ ಎಂಟರಿಂದ ಹತ್ತು ಮಂದಿ ಯುವಕರು ಆಕೆಯ ಮೇಲೆ ಹಲ್ಲೆ ನಡೆಸಿ ಸ್ನೇಹಿತನಿಗೆ ಬೆದರಿಸಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸಂಶಯಾಸ್ಪದ ನಡೆ ಆಧಾರದ ಮೇಲೆ ಪೊಲೀಸರು ಗ್ರಾಮದಲ್ಲಿನ ಕೆಲವು ಯುವಕರನ್ನು ಪೊಲೀಸ್ ಠಾಣೆಗೆ ಕರೆತರಲಾಗಿದೆ. ಇವರಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಹತ್ತು ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಅಶುತೋಷ್​ ಶೇಖರ್​ ತಿಳಿಸಿದ್ದಾರೆ.

ಇದನ್ನು ಓದಿ : MCA Election : ಕ್ರಿಕೆಟ್ ರಾಜಕೀಯದಲ್ಲಿ ಬಿಜೆಪಿ ನಾಯಕನ ವಿರುದ್ಧ ಸೋತ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ

ಇದನ್ನೂ ಓದಿ : 100 rs.controversy: ಸರ್ಕಾರಿ ಶಾಲೆಗಳಲ್ಲಿ ದೇಣಿಗೆ ವಸೂಲಿ; ತನ್ನ ಪಾತ್ರವಿಲ್ಲ ಎಂದ ಶಿಕ್ಷಣ ಸಚಿವ

Software engineer beaten up, gang-raped in Jharkhand’s Chaibasa, 10 booked

Comments are closed.