Son killed his Father: ಡ್ರಗ್ಸ್‌ಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ತಂದೆಯನ್ನೇ ಕೊಂದ ಮಗ

ನವದೆಹಲಿ: (Son killed his Father) ಮಾದಕ ವಸ್ತು ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ತಂದೆಯನ್ನು ಕೊಂದ ಘಟನೆ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ನಡೆದಿದೆ. ಮೃತರನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ತಂದೆಯನೇ ಕೊಲೆಗೈದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್‌ ತೆಗೆದುಕೊಳ್ಳಲು ಮಗ ತಂದೆ ಸುರೇಶ್‌ ಕುಮಾರ್‌ ಬಳಿಯಲ್ಲಿ ಹಣ ಕೇಳಿದ್ದಾನೆ. ಆದರೆ ತಂದೆ ಸುರೇಶ್‌ ಕುಮಾರ್‌ ಹಣ ಕೊಡಲು ನಿರಾಕರಿಸಿದ್ದು, ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮಗ ತಂದೆಯ ಮೇಲೆ ಹಲ್ಲೆ ನಡೆಸಿದ್ದು, ಸುರೇಶ್‌ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗಳ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ. ಅಲ್ಲಿ ಸುರೇಶ ಗಾಯಗೊಂಡಿರುವುದನ್ನು ಕಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ “ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಅಜಯ್‌ನನ್ನು ಬಂಧಿಸಲಾಗಿದೆ. ಇನ್ನೂ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ

ಹೈದರಾಬಾದ್: ನಗರದ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ

ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಟೆಂಟ್ ಹೋಲ್ ಸೇಲ್ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಟೆಂಡರ್‌ಗಳನ್ನು ಕರೆಯಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ವರದಿಗಳ ಪ್ರಕಾರ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಘಟನೆಗೆ ನಿಖರ ಕಾರಣಗಳು ಏನೆಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ : Hyderabad warehouse fire accident: ಹೈದರಾಬಾದ್ ನ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ

ಇದನ್ನೂ ಓದಿ : Mulki car accident: ಲಾರಿ ದುರಸ್ತಿ ವೇಳೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ

“ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Son killed his Father: Son killed his father for refusing to pay for drugs

Comments are closed.