ಭಾನುವಾರ, ಏಪ್ರಿಲ್ 27, 2025
HomeCrimeStudent commits suicide : 12 ನೇ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು, ವಾಮಾಚಾರದ ಶಂಕೆ

Student commits suicide : 12 ನೇ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು, ವಾಮಾಚಾರದ ಶಂಕೆ

- Advertisement -

ಹೈದರಾಬಾದ್‌ : (Student commits suicide) ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಭಾರತ್ ನಗರದಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಾಮಾಚಾರಕ್ಕೆ( “ಕ್ಷುದ್ರ ಪೂಜೆ”) ಹುಡುಗಿ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ.

ಕುಲ್ಸುಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಎಂಟು ದಿನಗಳಿಂದ ಕೆಲವು ಅಪರಿಚಿತ ವ್ಯಕ್ತಿಗಳು ‘ಕ್ಷುದ್ರ ಪೂಜೆ’ (ವಾಮಾಚಾರ) ನಡೆಸುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅವರು ಪ್ರತಿದಿನ ಬೆಳಿಗ್ಗೆ ಮನೆಯ ಪ್ರವೇಶದ್ವಾರದ ಬಳಿ ನಿಂಬೆಹಣ್ಣು ಮತ್ತು ದೀಪಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಿಕೊಂಡರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಗುರುವಾರ ಬೆಳಗ್ಗೆ ಮನೆಯ ಮುಂದೆ ನಿಂಬೆಹಣ್ಣು ಮತ್ತು ಮೇಣದ ಬತ್ತಿಯಂತಹ ಅವಶೇಷಗಳು ಪತ್ತೆಯಾಗಿವೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮಗಳನ್ನು ಪರಿಶೀಲಿಸಿದಾಗ ಆಕೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕಾಗಮಿಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ದ.ಕ ಜಿಲ್ಲಾಧಿಕಾರಿಗಳ ಕಚೇರಿ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ

ಸದ್ಯ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಕುಲ್ಸುಂಪುರ ಪೊಲೀಸ್ ಇನ್ಸ್‌ಪೆಕ್ಟರ್ ಟಿ ಅಶೋಕ್ ಕುಮಾರ್, ದೂರಿನಲ್ಲಿ ಕುಟುಂಬ ಸದಸ್ಯರು “ಬ್ಲಾಕ್ ಮ್ಯಾಜಿಕ್” ಅನ್ನು ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಮೃತರು ಅಪ್ರಾಪ್ತ ವಯಸ್ಸಿನವರಾಗಿರುವುದರಿಂದ ಪ್ರಕರಣದ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.

Student commits suicide: Class 12 girl commits suicide, suspected of witchcraft

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular