ಶಾಲಾ ಶುಲ್ಕ ಪಾವತಿಸದ ಕಾರಣ ಪರೀಕ್ಷಾ ಹಾಲ್ ಪ್ರವೇಶ ನಿರಾಕರಣೆ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬರೇಲಿ: (Student get suicide) ಶುಲ್ಕ ಪಾವತಿಸದ ಕಾರಣಕ್ಕೆ ಖಾಸಗಿ ಶಾಲೆಯೊಂದು ಪರೀಕ್ಷೆಗೆ ಕುಳಿತುಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ದುರ್ಗಾನಗರದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ಓದುತ್ತಿದ್ದಳು.

ದುರ್ಗಾನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳ ಕುಟುಂಬಸ್ಥರು ಶಾಲಾ ಶುಲ್ಕವನ್ನು ಕಟ್ಟಲು ವಿಫಲವಾಗಿದ್ದರು. ಈ ಹಿನ್ನಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

“ಶುಲ್ಕ ಕಟ್ಟಲು ವಿಫಲವಾದ ಕಾರಣ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ದುರ್ಗಾನಗರದ ಖಾಸಗಿ ಶಾಲೆಯ ಆಡಳಿತ ಮಂಡಳಿಯಿಂದ ಪರೀಕ್ಷೆ ಬರೆಯಲು ನಿರಾಕರಣೆಯಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ಸಿಟಿ ರಾಹುಲ್ ಭಾಟಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಶುಲ್ಕವನ್ನು ಸಲ್ಲಿಸಲು ಸ್ವಲ್ಪ ಸಮಯ ಕೋರಿದ್ದೆವು ಆದರೆ ಶಾಲೆಯ ಆಡಳಿತ ಮಂಡಳಿಯು ತಮ್ಮ ಮಗಳಿಗೆ ಪರೀಕ್ಷೆಗೆ ಹಾಜರಾಗಲು ಬಿಡಲಿಲ್ಲ. ತನ್ನ ಮಗಳು ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ ನೇಣು ಬಿಗಿದುಕೊಂಡಿದ್ದಾಳೆ ಎಂದು ಮೃತ ವಿದ್ಯಾರ್ಥಿನಿಯ ಕುಟುಂಬ ಹೇಳಿಕೊಂಡಿದೆ. ”ನನ್ನ ಮಗಳು ಸ್ಥಳೀಯ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದಳು. ಕೆಲವು ಆರ್ಥಿಕ ಅಡಚಣೆಗಳಿಂದಾಗಿ ಆಕೆಯ ಶಾಲಾ ಶುಲ್ಕವನ್ನು ಜಮಾ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಬಾಲಕಿಯ ತಂದೆ ಬಾರಾದರಿ ನಿವಾಸಿ ಅಶೋಕ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬ್ರಿಸ್ಬೇನ್‌ನ ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರಿಂದ ಕೃತ್ಯ

ಇದನ್ನೂ ಓದಿ : ಸಾಲಿಗ್ರಾಮದ ಕೆನರಾ ಬ್ಯಾಂಕ್‌ನಲ್ಲಿ ಸತ್ತ ವ್ಯಕ್ತಿಗೆ ಸಿಗುತ್ತೆ ಜೀವಂತ ವ್ಯಕ್ತಿಯ ಎಫ್‌ಡಿ ಹಣ !

ಇದೀಗ ಪೋಷಕರ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Student get suicide: Denial of entry to exam hall due to non-payment of school fees: Upset student commits suicide

Comments are closed.