ಶಿವಮೊಗ್ಗ : ಅಪ್ರಾಪ್ತ ವಿದ್ಯಾರ್ಥಿನಿಯ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಸಾಗರದ ತಾಲೂಕಿನ ಆನಂದಪುರದ ಶೆಟ್ಟಿಕೊಪ್ಪ ನಿವಾಸಿ ಪ್ರದೀಪ್ ( 25 ವರ್ಷ) ಎಂಬಾತನೇ ಪೊಲೀಸರಿಂದ ಬಂಧನಕ್ಕೆ ಒಳಗಾದ ಯುವಕ. ಸಾಗರದಲ್ಲಿ ಪಾಲುದಾರಿಕೆಯಲ್ಲಿ ಪ್ರದೀಪ ಬಟ್ಟೆ ಅಂಗಡಿ ಯನ್ನು ಮಾಡಿಕೊಂಡಿದ್ದ. ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದ.
ವಿದ್ಯಾರ್ಥಿನಿಯ ಅಶ್ಲೀಲ ಪೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದೀಗ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಸಾಗರ ಗ್ರಾಮಾಂತರ ಠಾಣೆಯ ಪೊಲೀಸ ರು ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿ ದ್ದಾರೆ. ಆರೋಪಿ ಪ್ರದೀಪನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.