- Advertisement -
ಬಂಟ್ವಾಳ :ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆಗೆ ಶರಣಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ನೀಲಯ್ಯ ಶೆಟ್ಟಿಗಾರ್ (42 ವರ್ಷ) ಹಾಗೂ ಕೇಸರಿ (39 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇಬ್ಬರೂ ಹಲವು ಸಮಯದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.