ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ: ಬಿಸಿಲಿನ ತಾಪಮಾನಕ್ಕೆ 11 ಮಂದಿ ಬಲಿ

ಮುಂಬೈ: (Sun stroke- 11 died) ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕನಿಷ್ಠ 11 ಮಂದಿ ಬಿಸಿಲಿನ ತಾಪಮಾನಕ್ಕೆ ಸಾವನ್ನಪ್ಪಿದ ದುರಂತ ಘಟನೆ ಮುಂಬೈನಲ್ಲಿ ನಡೆದಿದೆ. ಸುಮಾರು 24ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ನವಿಮುಂಬೈನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ತಿಳಿಸಿದ್ದಾರೆ.

ತೆರೆದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆರೆದ ಜನ ಬಿಸಿಲಿನ ತಾಪಮಾನಕ್ಕೆ ಅಸ್ವಸ್ಥರಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 24 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎನ್ನಲಾಗಿದೆ. “ಸುಮಾರು 50 ಜನರನ್ನು ನವಿ ಮುಂಬೈ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿದೆ, ಅದರಲ್ಲಿ 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದು ಸಿಎಂ ಹೇಳಿದ್ದಾರೆ.

ಹವಾಮಾನ ಕೇಂದ್ರವು ಘಟನೆಯ ಸ್ಥಳದಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಇನ್ನೂ ಬಿಸಿಲಿನ ತಾಪಮಾನಕ್ಕೆ ಬಲಿಯಾದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಶಿಂಧೆ ತಿಳಿಸಿದ್ದಾರೆ. ಇನ್ನೂ ಸೂರ್ಯನ ಹೊಡೆತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ತಿಳಿಸಿದ್ದಾರೆ. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದಲ್ಲಿ ರೋಗಿಗಳನ್ನು ವಿಶೇಷ ಆಸ್ಪತ್ರೆಗಳಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೋಗಿಗಳ ಸಂಬಂಧಿಕರು ಮತ್ತು ವೈದ್ಯಕೀಯ ತಂಡಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಸಮಯೋಚಿತ ನವೀಕರಣಗಳನ್ನು ನೀಡಲು ಪನ್ವೆಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಡೆಪ್ಯುಟಿ ಮುನ್ಸಿಪಲ್ ಕಮಿಷನರ್ ಶ್ರೇಣಿಯ ಅಧಿಕಾರಿಯನ್ನು ನಿಯೋಜಿಸಲಾಗಿದೆ.

ಕಾರ್ಯಕ್ರಮ ನಡೆದ 306 ಎಕರೆ ಮೈದಾನವು ಜನರಿಂದ ತುಂಬಿ ತುಳುಕುತ್ತಿತ್ತು ಮತ್ತು ಶ್ರೀ ಸದಾಸ್ಯ (ಧರ್ಮಾಧಿಕಾರಿಗಳ ಸಂಸ್ಥೆ) ಅನುಯಾಯಿಗಳಿಗೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಆಡಿಯೋ/ವೀಡಿಯೋ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಅಮಿತ್ ಶಾ ಅವರು ಧರ್ಮಾಧಿಕಾರಿಗಳಿಗೆ ಪ್ರಶಸ್ತಿ ನೀಡಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ 25 ಲಕ್ಷ ರೂ.ಗಳ ಚೆಕ್ ಹಾಗೂ 10 ಅಡಿ ಗುಲಾಬಿ ಹೂವಿನ ಹಾರವನ್ನು ನೀಡಿದರು. ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಸಾಹಿತ್ಯ, ಕ್ರೀಡೆ, ವಿಜ್ಞಾನ, ಸಮಾಜಕಾರ್ಯ, ಪತ್ರಿಕೋದ್ಯಮ, ಸಾರ್ವಜನಿಕ ಆಡಳಿತ ಮತ್ತು ಆರೋಗ್ಯ ಸೇವೆಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶಿಂಧೆ, ಉಪ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ಸೇರಿದಂತೆ ಶಾಸಕರು, ಎಂಎಲ್ಸಿಗಳು, ಸಚಿವರು ಉಪಸ್ಥಿತರಿದ್ದರು

ಇದನ್ನೂ ಓದಿ : Dubai fire disaster : ದುಬೈ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; ದಂಪತಿ ಸೇರಿದಂತೆ 4 ಮಂದಿ ಭಾರತೀಯರು ಸಾವು

Sun stroke- 11 died: Maharashtra Bhushan award ceremony: 11 people died due to heat stroke

Comments are closed.