ಎಂ.ಎಸ್‌.ಧೋನಿ ಸಿನಿಮಾ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

0

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು.

ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ದೊಡ್ಡ ಮಟ್ಟದ ಬ್ರೇಕ್ ನೀಡಿತ್ತು. ಸುಶಾಂತ್ ಸಿಂಗ್ ಆತ್ಮಹತ್ಯೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ

Leave A Reply

Your email address will not be published.