ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಶಾಂತ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ತನ್ನ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಯ ಬೆನ್ನಲ್ಲೇ ಸಾಕಷ್ಟ ಚರ್ಚೆಗಳು ವ್ಯಕ್ತವಾಗಿತ್ತು. ಇದೀಗ ಕುಟುಂಬಸ್ಥರು ಕೂಡ ಸುಶಾಂತ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನೇಣುಬಿಗಿದುಕೊಂಡ ಕಾರಣಕ್ಕೆ ಸುಶಾಂತ್ ಸಿಂಗ್ ರಜಪೂತ್ ಮರಣ ಹೊಂದಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ ನಲ್ಲಿ ಹೇಳಲಾಗಿದೆ. ಆದರೆ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಸೂಸೈಡ್ ನೋಟ್ ಬರೆದಿಟ್ಟಿಲ್ಲ. ಹೀಗಾಗಿ ಇದೊಂದು ಕೊಲೆ ಎಂದು ಸುಶಾಂತ್ ಸೋದರ ಮಾವ ಆರ್ಸಿ ಸಿಂಗ್ ಹೇಳಿದ್ದಾರೆ.

ಇದು ಆತ್ಮಹತ್ಯೆಯಲ್ಲ ಕೊಲೆ. ಹೀಗಾಗಿ ಈ ಪ್ರಕರಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.