Terrible Bus Accident : ಭೀಕರ ಬಸ್‌ ದುರಂತ 25 ಮಂದಿ ಸಾವು, 8 ಮಂದಿ ಗಂಭೀರ

ಮುಂಬೈ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳ್ಳಗೆ 32 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ತಗುಲಿದ (Terrible Bus Accident ) ಪರಿಣಾಮವಾಗಿ 3 ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸಾವನ್ನಪ್ಪಿದ್ದು, 8 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ.

ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಬಾರೀ ದುರಂತ ಸಂಭವಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಘಟನೆ ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ನಡೆದಿದೆ. “ಬಸ್ಸಿನಿಂದ ಬೆಂಕಿ ತಗುಲಿದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ 6 ರಿಂದ 8 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಬೆಳಗಿನ ಜಾವ 1.30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಟಯರ್‌ ಒಡೆದು ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ ಎಂದು ಚಾಲಕ ತಿಳಿಸಿದ್ದಾರೆ. ನಂತರ ವಾಹನದ ಡೀಸೆಲ್ ಟ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿತು. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ತಿಳಿಸಿದ್ದಾರೆ.

ಇದನ್ನೂ ಓದಿ : Lorry and Auto Accident : 2 ಆಟೋ – ಲಾರಿ ನಡುವೆ ಭೀಕರ ಅಪಘಾತ : 6 ಮಂದಿ ಸಾವು, 3 ಮಕ್ಕಳು ಗಂಭೀರ

ಇದನ್ನೂ ಓದಿ : Road Accident In Kenya : ರಸ್ತೆ ಅಪಘಾತದಲ್ಲಿ 48 ಮಂದಿ ಸಾವು, ಹಲವರಿಗೆ ಗಾಯ

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಮತ್ತು ಅವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಈ ದುರದೃಷ್ಟಕರ ಘಟನೆಯಲ್ಲಿ ಮೃತರ ಸಂಬಂಧಿಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿಗಳ ಸಹಾಯವನ್ನು ಘೋಷಿಸಿದ್ದಾರೆ. ಈ ಭೀಕರ ಅಪಘಾತದಿಂದ ನೊಂದಿದ್ದೇನೆ ಎಂದು ಹೇಳಿದ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.

Terrible bus accident 25 dead, 8 seriously

Comments are closed.