ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: 9 ತಿಂಗಳ ಮಗು ಸೇರಿ ಇಬ್ಬರು ಸಾವು

ತುಮಕೂರು: (Thumkur scooter accident) ಕಳೆದ ಕೆಲವು ದಿನಗಳಿಂದ ತುಮಕೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ತುಮಕೂರಿನಲ್ಲಿಯೇ ಇನ್ನೊಂದು ಘಟನೆ ನಡೆದಿದ್ದು, ಮಗು ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.

ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ (Thumkur scooter accident) ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ 9 ತಿಂಗಳ ಮಗು ಹಾಗೂ ವೃದ್ಧ ಮೃತಪಟ್ಟಿದ್ದಾರೆ. ನಿಂಗಪ್ಪ (65 ವರ್ಷ) ಹಾಗೂ 9 ತಿಂಗಳ ಮಗು ಸಾವನ್ನಪ್ಪಿರುವ ದುರ್ದೈವಿಗಳು. ಇನ್ನೋರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ತುರುವೇಕೆರೆ ತಾಲೂಕಿನ ಆನೆಮಳೆ ಗೇಟ್‌ ಬಳಿ ರಸ್ತೆಯಲ್ಲಿ ವೃದ್ಧ ನಿಂಗಪ್ಪ, ಮಹಿಳೆ ಹಾಗೂ ಮಗು ಮೂವರು ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಬಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಮತ್ತು ಮಗು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ : Mangalore Bomb Blast Case: ಉಗ್ರ ಶಾರೀಖ್‌ ನನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಿದ ಎನ್.ಐ.ಎ

ಘಟನೆಯ ಕುರಿತು ತುರುವೇಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : Unethical Police Giri: ಮೂಲ್ಕಿಯಲ್ಲಿ ಯುವಕನಿಗೆ ಮಾರಣಾಂತಿಕ ಹಲ್ಲೆ

ಇದನ್ನೂ ಓದಿ : Avatar 2: ಅವತಾರ್ 2 ಸಿನಿಮಾ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವು

ಇದನ್ನೂ ಓದಿ : Attempt to murder case: ಪತ್ನಿಯೊಂದಿಗೆ ಜಗಳ: 2 ವರ್ಷದ ಮಗನನ್ನು ಬಾಲ್ಕನಿಯಿಂದ ಎಸೆದು ಬಳಿಕ ತಾನೂ ಜಿಗಿದ ವ್ಯಕ್ತಿ

ಇದನ್ನೂ ಓದಿ : ನೋಯ್ಡಾದಲ್ಲಿ ಐಶ್ವರ್ಯಾ ರೈ ಬಚ್ಚನ್ ನಕಲಿ ಪಾಸ್‌ಪೋರ್ಟ್ ಪತ್ತೆ: ಮೂವರ ಬಂಧ

ಇದನ್ನೂ ಓದಿ : Toxic Spinach :ಹುಷಾರ್ : ಪಾಲಕ್ ಸೊಪ್ಪು ತಿಂದು ಆಸ್ಪತ್ರೆ ಸೇರಿದ ಸಾವಿರಾರು ಜನರು

The number of accidents in Thumkur is increasing from last few days. Many accidents are happening everyday and many people have lost their lives. Now another incident took place in Tumkur where two people including a child died.

Comments are closed.