Toilet video case : ಉಡುಪಿ : ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : 3 ವಿದ್ಯಾರ್ಥಿನಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲು

ಉಡುಪಿ : ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್‌ ಚಿತ್ರೀಕರಣ (Toilet video case) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವೆಸಗಿರುವ ಮೂವರು ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ವಿರುದ್ದ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ 509, 204, 175, 34 66 (ಇ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಚಿತ್ರೀಕರಣ ನಡೆಸಿರುವ ವಿದ್ಯಾರ್ಥಿನಿಯರಾದ ಶಬನಾಝ್‌, ಆಲ್ಪೀಯಾ, ಆಲಿಮಾ ವಿರುದ್ದ ಮಲ್ಪೆ ಪೊಲೀಸ್‌ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಪ್ರಮುಖವಾಗಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ, ವಿಡಿಯೋ ಡಿಲೀಟ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದರು.

ಉಡುಪಿ ನಗರ ನೇತೃ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿಯ ವಿಡಿಯೋವನ್ನು ಚಿತ್ರೀಕರಿಸಿ ಮೊಬೈಲ್‌ ಮೂಲಕ ಶೇರ್‌ ಮಾಡಿರುವ ಕುರಿತು ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ನಿನ್ನೆ ಸುದ್ದಿಗೋಷ್ಠಿಯನ್ನು ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆಯನ್ನು ನೀಡಿದ್ದರು. ವಿದ್ಯಾರ್ಥಿಗಳು ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮಿ ಅವರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಉಡುಪಿಯ ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ : ತಪ್ಪಿತಸ್ಥ ವಿದ್ಯಾರ್ಥಿನಿಯರ ಅಮಾನತು, ಆಡಳಿತ ಮಂಡಳಿ ಸ್ಪಷ್ಟನೆ

ಕಾಲೇಜಿನಲ್ಲಿ ನಡೆದಿರುವ ಘಟನೆಯ ಕುರಿತು ಸಮಗ್ರ ತನಿಖೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಈ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡಿತ್ತು. ಇದೀಗ ಬಿಜೆಪಿ ನಾಳೆ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇನ್ನೊಂದೆಡೆಯಲ್ಲಿ ಉಡುಪಿ ಶಾಸಕ ಯಶಪಾಲ್‌ ಸುವರ್ಣ ಹಾಗೂ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತನಿಖೆಗೆ ಆಗ್ರಹಿಸಿದ್ದಾರೆ. ಇದೆಲ್ಲದರ ಬೆನ್ನಲ್ಲೇ ಪೊಲೀಸರು ಇದೀಗ ಪ್ರಕರಣ ಕುರಿತು ಸುಮೋಟೋ ಕೇಸ್‌ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

Toilet video case: Udupi: Video shooting case in the toilet: A case has been registered against 3 female students and the college management

Comments are closed.