Truck- Bus accident: ಟ್ರಕ್ – ಬಸ್ ಭೀಕರ ಅಪಘಾತ : 55 ಮಂದಿಗೆ ಗಾಯ

ಬಿಹಾರ: (Truck- Bus accident) ರಾಷ್ಟ್ರೀಯ ಹೆದ್ದಾರಿಯಲ್ಲಿ (NH-28) ಟ್ರಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 55 ಜನರಿಗೆ ಗಾಯಗಳಾಗಿವೆ. 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹಾರದ ಸಮಸ್ತಿಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಜಿಲ್ಲೆಯ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗ್ಗೆ ಖಗರಿಯಾಕ್ಕೆ ಬಸ್ ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 28 ರ ಚಾಂದ್ ಚೌರ್ ದಿಹ್ ಬಳಿ ಪ್ರಯಾಣಿಸುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ ಬಸ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ 50-55 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಸಾವು ವರದಿಯಾಗಿಲ್ಲ. ಪೊಲೀಸರ ಪ್ರಕಾರ, ಒಬ್ಬ ಮಹಿಳೆ ಗಂಭೀರವಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರನ್ನು ಖಗರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗಮಿಸಿದ ಸ್ಥಳೀಯ ಪೊಲೀಸರು ಬಸ್‌ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಲಾರಿಗೆ ಕಾರು ಡಿಕ್ಕಿ: 5 ಮಂದಿ ಸಾವು

ಅಂಬಲಪುಳ: ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯ ಅಂಬಲಪ್ಪುಳ ಬಳಿ ನಡೆದಿದೆ. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆಲಪ್ಪುಳ ಜಿಲ್ಲೆಯ ಅಂಬಲಪ್ಪುಳ ಬಳಿ ತಿರುವನಂತಪುರಂ ಕಡೆಗೆ ಹೋಗುತ್ತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಇವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಅಂಬಲಪುಳ ಪೊಲೀಸರು ಸ್ಥಳಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನೆಯ ಕುರಿತು ಅಂಬಲಪುಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Cement container accident: ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್‌ ಕಂಟೈನರ್‌ ಪಲ್ಟಿ: ಕಾರು ಜಖಂ

ಇದನ್ನೂ ಓದಿ : Crane collapsed-4 death: ತಮಿಳುನಾಡಿನಲ್ಲಿ ಕ್ರೇನ್‌ ಕುಸಿದು ನಾಲ್ವರು ದುರ್ಮರಣ : 9 ಮಂದಿಗೆ ಗಾಯ

ಇದನ್ನೂ ಓದಿ : ನಕಲಿ ಮದ್ಯ ಸೇವನೆ : 3 ಸಾವು, 6 ಮಂದಿ ಆಸ್ಪತ್ರೆಗೆ ದಾಖಲು

Truck-Bus accident: Truck-Bus accident: 55 injured

Comments are closed.