Truck-Car accident: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: 3 ಮಂದಿ ಸ್ಥಳದಲ್ಲೇ ಸಾವು

ರತ್ನಗಿರಿ: (Truck-Car accident) ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗ್ಗೆ ಉರ್ಸೆ ಗ್ರಾಮದ ಬಳಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತಪಟ್ಟವರಲ್ಲಿ ಒಬ್ಬನನ್ನು ವಿಜಯ್ ವಿಶ್ವನಾಥ್ ಖೇರ್ ಎಂದು ಗುರುತಿಸಲಾಗಿದೆ.

ಕಾರು ಮುಂಬೈನಿಂದ ಪುಣೆಗೆ ತೆರಳುತ್ತಿದ್ದು, ಹಿಂದಿನಿಂದ ಲೋಡ್ ಆಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿಯಾಗಿದೆ. ಪರಿಣಾಮ ಕಾರು ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಟ್ರಕ್‌ನಡಿ ಸಿಲುಕಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಆಗಿದ್ದು, ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆಗೆದ ನಂತರ ಎಲ್ಲವನ್ನೂ ಸಹಜ ಸ್ಥಿತಿಗೆ ತರಲಾಯಿತು” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದಕೊಂಡ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ದುರಂತ: 4 ಮಹಿಳೆಯರು ಸೇರಿದಂತೆ 6 ಮಂದಿ ಸಾವು

ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ದುರಂತ: 4 ಮಹಿಳೆಯರು ಸೇರಿದಂತೆ 6 ಮಂದಿ ಸಾವು

ಸಿಕಂದರಾಬಾದ್‌ : ನಗರದ ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಸ್ವಪ್ನಲೋಕ ಕಾಂಪ್ಲೆಕ್ಸ್‌ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೃತರನ್ನು ಶಿವ, ಪ್ರಶಾಂತ್, ಪ್ರಮೀಳಾ, ಶ್ರಾವಣಿ, ವೆನ್ನೆಲಾ ಮತ್ತು ತ್ರಿವೇಣಿ ಎಂದು ಗುರುತಿಸಲಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಹೊಗೆ ಸೇವನೆಯೇ ಸಾವಿಗೆ ಕಾರಣ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ : Cheetah helicopter crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್‌ಗಳು ನಾಪತ್ತೆ

ಸಿಕಂದರಾಬಾದ್‌ ನ ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡ 12 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ, ಉಳಿದವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಿಟಿಐ ಸೇರಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿರುವುದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಇದನ್ನೂ ಓದಿ : Fraud in name of airlines : ಖಾಸಗಿ ಏರ್‌ಲೈನ್ಸ್‌ನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ : 9 ಮಂದಿ ಅರೆಸ್ಟ್

Truck-Car accident: A car collided with a parked truck: 3 died on the spot

Comments are closed.