Truck-car collision: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ : 3 ಸಾವು, 2 ಮಂದಿಗೆ ಗಾಯ

ಗುರುಗ್ರಾಮ್: (Truck-car collision) ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಟ್ರಕ್‌ಗೆ ಮಾರುತಿ ಸುಜುಕಿ ಬಲೆನೊ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುಗ್ರಾಮ್‌ ನ ಬಿಲಾಸ್ಪುರ್ ಚೌಕ್ ಬಳಿಯಲ್ಲಿ ನಡೆದಿದೆ.

ಕಾರಿನಲ್ಲಿ ಐವರು ಸ್ನೇಹಿತರು ರೇವಾರಿಯಿಂದ ಪಟೌಡಿಗೆ ತೆರಳುತ್ತಿದ್ದು,ರಾಷ್ಟ್ರೀಯ ಹೆದ್ದಾರಿ 48 ಬಳಿ ನಿಂತಿದ್ದ ಟ್ರಕ್‌ ಗೆ ಢಿಕ್ಕಿ (Truck-car collision) ಹೊಡೆದಿದ್ದಾರೆ. ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು,ಇಬ್ಬರು ಚಿಕಿತ್ಸೆ ಫಲಕಾರಿಯಾದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸವಾರರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವೇಳೆ ಕಾರಿನ ಚಾಲಕ ಆಸ್ಪತ್ರೆಗೆ ಕರೆತರುವ ಮೊದಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದು, ಇನ್ನೊಬ್ಬರು ಚಿಕಿತ್ಸೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಸದ್ಯ ಇಬ್ಬರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಕುರಿತು ಗುರುಗ್ರಾಮ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲೈಟ್ ಅಥವಾ ರಿಫ್ಲೆಕ್ಟರ್‌ಗಳಿಲ್ಲದೆ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಕುರಿತು ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿದ ಮಿಸಿ ಬಸ್:ನಾಲ್ವರು ಸಾವು

ಕಥುವಾ: ‌ ಮಿನಿ ಬಸ್‌ವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದರಕ್ಕೆ ಉರುಳಿದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಅಪಘಾತಕ್ಕೊಳಗಾಗಿದೆ ಎಂದು ಹೇಳಲಾಗುತ್ತಿದೆ.

ಬಸ್ ಮೊಂಡ್ಲಿ ಗ್ರಾಮದಿಂದ ಧನು ಪರೋಲ್ ಗ್ರಾಮಕ್ಕೆ ತೆರಳುತ್ತಿದ್ದು, ಬಿಲ್ಲವರದ ಸಿಲಾ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, 60 ವರ್ಷದ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 16 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ : Praveen Nettaru murder case: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್‌ಐ ನಂಟು ಹೊಂದಿರುವ 20 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ಇದನ್ನೂ ಓದಿ : Hit and drag case: ಬಾನೆಟ್‌ ಮೇಲೆ ಯುವಕನನ್ನು 1 ಕಿ.ಮೀ. ಎಳೆದೊಯ್ದ ಕಾರು ಚಾಲಕಿ

ಸದ್ಯ ಘಟನೆಯ ಕುರಿತು ಕಥುವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Truck-car collision: Car collides with a parked truck: 3 dead, 2 injured

Comments are closed.